ಮೂಡುಬಿದಿರೆ: ವಿದ್ಯಾಗಿರಿಯ ಆಳ್ವಾಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ತರಗತಿಯಲ್ಲೇ ಕುಸಿದು ಬಿದ್ದು, ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಆಳ್ವಾಸ್ ಕಾಲೇಜಿನ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ನಿವೇದಿತಾ ಆರ್.ಪಿ. ತರಗತಿಯಲ್ಲಿ ಸೆಮಿನಾರ್ ನಡೆಯುತ್ತಿದ್ದ ಸಂದರ್ಭ ಕುಸಿದು ಬಿದ್ದಿದ್ದರು. ತಕ್ಷಣ ಆಕೆಯನ್ನು ಮೂಡುಬಿದರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ಹೊತ್ತಿಗೆ ಮೃತಪಟ್ಟಿದ್ದಾರೆ.
ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
