ಮೂಡುಬಿದರೆ: ಸಾರ್ವಜನಿಕ ಗಣೇಶೋತ್ಸವ ಬಿರಾವು ಇದರ ವತಿಯಿಂದ 10ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಗುರುವಾರ ನೆರವೇರಿತು. ಧಾರ್ಮಿಕ ಸಭೆಯಲ್ಲಿ ಮೂಡುಬಿದರೆ ಪುರಸಭಾಧ್ಯಕ್ಷೆ ರೂಪಾ ಸಂತೋಷ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಶ್ರೀಕ್ಷೇತ್ರ ಕರಿಂಜೆಯ ಶ್ರೀ ಮುಕ್ತಾನಂದ ಸ್ವಾಮಿ ಆಶೀರ್ವಚನ ನೀಡಿದರು. ಪ್ರಸಾದ್ ಶೆಟ್ಟಿ ಮಂಗಳೂರು ಅಧ್ಯಕ್ಷತೆ ವಹಿಸಿದರು. ಮಾಜಿ ಸಚಿವ ಅಮರನಾಥ ಶೆಟ್ಟಿ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಉಮನಾಥ ಕೋಟ್ಯಾನ್, ಕಾರ್ಯದರ್ಶಿ ನಾಗರಾಜ್ ಬಿ, ಕೃಷ್ಣರಾಜ ಹೆಗ್ಡೆ, ರೂಪ ಸಂತೋಷ್ ಶೆಟ್ಟಿ, ಹರೀಶ್ ಶೆಟ್ಟಿ ಉಪಸ್ಥಿತರಿದ್ದರು. ಸುರೇಶ್ ಶೆಟ್ಟಿ ಬಿರಾವು ಸ್ವಾಗತಿಸಿದರು. ಅಶೋಕ್ ಕುಮಾರ್ ವಂದಿಸಿದರು. ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಸದಸ್ಯರು ಭಾಗವಹಿಸಿದರು.
