ಬಜಪೆ: ಸಹಕಾರಿ ಕ್ಷೇತ್ರದಲ್ಲಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಅಗ್ರ ಪಂಕ್ತಿಯಲ್ಲಿರುವ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ 2013-14ನೇ ಸಾಲಿನ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಅಪೆಕ್ಸ್ ಬ್ಯಾಂಕ್‍ನ ಸಭಾಂಗಣದಲ್ಲಿ ಜರಗಿದ ಸಮಾರಂಭದಲ್ಲಿ ಪ್ರಧಾನ ಮಾಡಲಾಯಿತು.
2003-04ನೇ ಸಾಲಿನಿಂದ ಮೊದಲ್ಗೊಂಡು ಬಜಪೆ ವ್ಯವಸಾಯ ಬ್ಯಾಂಕ್ ಈ ಪ್ರಶಸ್ತಿಯನ್ನು ಸತತ 11 ವರ್ಷಗಳಿಂದ ಪಡೆಯುತ್ತಿರುವುದು ಅದರ ಸಾಧನೆಯನ್ನು ಗುರುತಿಸುತ್ತದೆ. ಪ್ರಾಥಮಿಕ ಕೃಷಿ ಪತ್ತಿನ ಎ ದರ್ಜೆಯ ಬ್ಯಾಂಕ್‍ಗಳಿಗೆ ನೀಡುವ ಪ್ರಥಮ ಸ್ಥಾನದ ಪ್ರಶಸ್ತಿ ಇದಾಗಿದೆ.
19vm. Bajpe VSS
ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನ ಅಧ್ಯಕ್ಷ ಹಾಗೂ ಶಾಸಕ ಕೆ.ಎನ್. ರಾಜಣ್ಣ ಹಾಗೂ ವ್ಯವಸ್ಥಾಪನಾ ನಿರ್ದೇಶಕ ಜಿ.ಎಸ್. ರಮಣ ರೆಡ್ಡಿ ಅವರುಗಳು ಬಜಪೆ ವ್ಯವಸಾಯ ಬ್ಯಾಂಕ್‍ನ ಅಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು ಹಾಗೂ ಪ್ರಧಾನ ವ್ಯವಸ್ಥಾಪಕ ರತ್ನಾಕರ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡುವ ದ.ಕ. – ಉಡುಪಿ ಜಿಲ್ಲಾ ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ ಎ ದರ್ಜೆಯ ಬ್ಯಾಂಕ್‍ಗಳಿಗೆ ನೀಡುವ ಪ್ರಥಮ ಸ್ಥಾನದ ಪ್ರಶಸ್ತಿಯನ್ನು ಕೂಡ ಬಜಪೆ ವ್ಯವಸಾಯ ಬ್ಯಾಂಕ್ ಸತತ 15 ವರ್ಷಗಳಿಂದ ಪಡೆಯುತ್ತಿದೆ ಎಂಬುದರಲ್ಲಿ ಇಲ್ಲಿ ಉಲ್ಲೇಖಿಸಬಹುದು.
ಅಪೆಕ್ಸ್ ಬ್ಯಾಂಕ್‍ನ ಎಲ್ಲಾ ನಿರ್ದೇಶಕರುಗಳು, ಅಕಾರಿಗಳು, ದ.ಕ. ಜಿಲ್ಲಾ ಕೇಂದ್ರ ಸಹಕಾರ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್, ವ್ಯವಸ್ಥಾಪನಾ ನಿರ್ದೇಶಕ ಬಾಬು ಬಿಲ್ಲವ ಎಲ್ಲಾ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ಗಳ ಅಧ್ಯಕ್ಷರು ವ್ಯವಸ್ಥಾಪನಾ ನಿರ್ದೇಶಕರುಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *