ಬಂಟ್ವಾಳ:ಶಿಕ್ಷಕರು ಮತ್ತು ಶಿಕ್ಷಕರಿಗಾಗಿ ರೂಪುಗೊಂಡ ಟೀಚರ್ಸ್ ಕೋ ಅಪರೇಟಿವ್ ಬ್ಯಾಂಕ್ ಇದೀಗ ಎಲ್ಲೆಡೆ ಎಲ್ಲರಿಗಾಗಿ ಹಣಕಾಸು ಸೇವೆ ಒದಗಿಸುವ ಮೂಲಕ ಜನಸ್ನೇಹಿಯಾಗಿ ಬೆಳೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶೇಷಶಯನ ಕಾರಿಂಜ ಹೇಳಿದ್ದಾರೆ.

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ನ ಶತಮಾನೋತ್ಸವ ಕಾರ್ಯಕ್ರಮ ಪ್ರಯುಕ್ತ ಶನಿವಾರ ನಡೆದ ಗ್ರಾಹಕರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.
ಬ್ಯಾಂಕ್ ಅಧ್ಯಕ್ಷ ಚೇರ್ಕಾಡಿ ಅಶೋಕ್ ಕುಮಾರ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ವೇಳೆ ಬ್ಯಾಂಕಿನ ಸ್ಥಾಪಕಾಧ್ಯಕ್ಷ ಶಿರಾಲಿ ಸುಬ್ಬರಾವ್ ಭಾವಚಿತ್ರ ಆನಾವರಣಗೊಳಿಸಿ, ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ದೇವಪ್ಪ ನಾಯಕ್ ಇವರನ್ನು ಸನ್ಮಾನಿಸಲಾಯಿತು.
ಬಂಟ್ವಾಳ ಎಸ್ ವಿ ಎಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಪಾಂಡುರಂಗ ನಾಯಕ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ ರೈ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೋಯೆಲ್ ಲೋಬೋ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ. ರಾಮಚಂದ್ರ ರಾವ್, ಬ್ಯಾಂಕಿನ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮತ್ತಿತರರು ಇದ್ದರು.
ಬ್ಯಾಂಕಿನ ನಿರ್ದೇಶಕ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ, ಮಹಾಪ್ರಬಂಧಕ ಪ್ರಮೋದ್ ಹೆಗ್ಡೆ ಜಿ. ಪ್ರಾಸ್ತಾವಿಕ ಮಾತನಾಡಿದರು. ಶಾಖಾಧಿಕಾರಿ ಶ್ರೀಮತಿ ಗೀತಾ ಆಚಾರ್ಯ ವರದಿ ವಾಚಿಸಿದರು. ಕೃಷ್ಣರಾಜ್ ಶೆಟ್ಟಿ ವಂದಿಸಿದರು. ಶರಾವತಿ ಕಾರ್ಯಕ್ರಮ ನಿರೂಪಿಸಿದರು.
