ಬಂಟ್ವಾಳ ತಾಲೂಕು ಬಿ.ಜೆ.ಪಿ ಬಂಟ್ವಾಳ ಕ್ಷೇತ್ರ ಸಮಿತಿ ಇದರ ನೇತೃತ್ವದಲ್ಲಿ ಬಿ.ಸಿ.ರೋಡಿನ ಮೆಸ್ಕಾಂ ಕಛೇರಿ ಮುತ್ತಿಗೆ, ಮತ್ತು ರಾಜ್ಯದ ಕಾಂಗ್ರೇಸ್ ಸರ್ಕಾರದ “ಕತ್ತಲೆ ಭಾಗ್ಯ” ಯೋಜನೆ ವಿರುದ್ದ ಬೃಹತ್ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯ ಮುನ್ನ ಬಿ.ಸಿ.ರೋಡಿನ ಜಂಕ್ಷನ್‍ನಿಂದ ಮೆಸ್ಕಾಂ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಕಾರ್ಯಕರ್ತರು ನಾಗರಿಕರು,ರೈತಬಂಧುಗಳು,ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕ್ಷೇತ್ರ ಸಮಿತಿ ಅಧ್ಯಕ್ಷರಾದ ಜಿ.ಆನಂದ, ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ, ವಿಕಾಸ್ ಪುತ್ತೂರು, ಸುಲೋಚನಾ ಜಿ.ಕೆ. ಭಟ್, ದಿನೇಶ್ ಭಂಡಾರಿ, ದೇವದಾಸ್ ಶೆಟ್ಟಿ, ತುಂಗಪ್ಪ ಬಂಗೇರ,ಗೋವೀಂದ ಪ್ರಭು ಮತ್ತಿತರರು ಉಪಸ್ಥಿತರಿದ್ದರು.



