ಬಂಟ್ವಾಳ: ಮೆಲ್ಕಾರ್ ನಲ್ಲಿ ಕಾರ್ಯಚರಿಸುತ್ತಿರುವ ಶ್ರೀ ಗುರು ಕ್ರೆಡಿಕ್ ಕೋ ಆಪರೇಟಿವ್ ಸೊಸೈಟಿ ಯ ನೂತನ ಶಾಖೆ ಸೆ.25 ರಂದು ಕಳ್ಳಿಗೆ ಗ್ರಾಮದ ಪಚ್ಚಿನಡ್ಕದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.

ಬಿ.ಸಿ.ರೋಡಿನ ಪ್ರಸ್ ಕ್ಲಬ್ನಲ್ಲಿ ಮಂಗಳವಾರ ಸಂಜೆ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು,ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಯವರು ಶುಕ್ರವಾರ ಬೆಳಿಗ್ಗೆ ನೂತನ ಶಾಖೆಯನ್ನು ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸುವರು, ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ, ಸದಸ್ಯ ಎಫ್ರೆಮ್ ಸಿಕ್ವೇರಾ, ಕಳ್ಳಿಗೆ ಗ್ರಾ.ಪಂ. ಅಧ್ಯಕ್ಷೆ ರತ್ನ, ಅಮ್ಟಾಡಿ ಗ್ರಾ.ಪಂ. ಅಧ್ಯಕ್ಷ ಹರೀಶ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದರು.

ಸೊಸೈಟಿ ಅಧ್ಯಕ್ಷ ಸೇಸಪ್ಪ ಕೂಟ್ಯಾನ್ ಅವರು ಮಾತನಾಡಿ, ಕಳೆದ ಸಾಲಿನಲ್ಲಿ , 23 ಕೋಟಿ ರೂ ವ್ಯವಹಾರ ನಡೆಸಿದ್ದು, ನಿಖುರ ಠೇವಣಿಗೆ ಹೆಚ್ಚು ಬಡ್ಡಿ ಹಾಗೂ ಕಡಿಮೆ ಬಡ್ಡಿದರಕ್ಕೆ ಸಾಲ ಕೊಡುವ ಮೂಲಕ ಸೊಸೈಟಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿದೆ, ಮುಂದಿನ ದಿನಗಳಲ್ಲಿ ವಿವಿಧೆಡೆಗಳಲ್ಲಿ ಹೊಸ ಶಾಖೆ ಆರಂಭಿಸುವ ಇರಾದೆ ಇರಿಸಿಕೊಳ್ಳಲಾಗಿದೆ ಎಂದವರು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ನಿರ್ದೇಶಕರಾದ ಸಂಜೀವ ಪೂಜಾರಿ ಬೊಳ್ಳಾಯಿ, ರತ್ನಾಕರ ನಾಡಾರು, ಸಂತೋಷ್ ಕುಮಾರ್ ಕೊಟ್ಟಿಂಜ ಹಾಗೂ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಉಪಸ್ಥಿತರಿದ್ದರು

By suddi9

Leave a Reply

Your email address will not be published. Required fields are marked *