ಬಂಟ್ವಾಳ:ತಾಲ್ಲೂಕಿನ ಬಿ.ಸಿ.ರೋಡ್ ಪದ್ಮ ವಾಣಿಜ್ಯ ಸಂಕೀರ್ಣ ಆವರಣದಲಿನಿದೇ 27ರಂದು ವಿಶೇಷ ‘ಪುಸ್ತಕ ಹಬ್ಬ’ ಆಯೋಜಿಸಲಾಗಿದೆ.
ಬಂಟ್ವಾಳ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸುವರು. ಬಂಟ್ವಾಳ ತಾಲ್ಲೂಕು ಪಿಂಚಣಿದಾರ ಸಂಘದ ಅಧ್ಯಕ್ಷ ಬಿ.ತಮ್ಮಯ, ಬಿ.ಸಿ.ರೋಡ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಗಿರೀಶ್ ಭಟ್ ಅಜೆಕ್ಕಳ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಯಾನಂದ ಪೆರಾಜೆ, ಬಂಟ್ವಾಳ ಪತ್ರಕರ್ತರ ಸಂಘದ ಅಧ್ಯಕ್ಷ ಮೋಹನ್ ಕೆ. ಶ್ರೀಯಾನ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಪುಸ್ತಕ ಮಾರಾಟ ಮತ್ತು ಪ್ರದರ್ಶನ ಮಳಿಗೆಗೆ ಭಾಗವಹಿಸಲು ಇಚ್ಛಿಸುವ ಆಸಕ್ತರು ಮೊಬೈಲ್ ಸಂಖ್ಯೆ 9448887765 ಸಂಖ್ಯೆಯನ್ನು ಸಂಪರ್ಕಿಸುವಂತೆ ಕಾರ್ಯಕ್ರಮ ಸಂಯೋಜಕ ವಿ.ಎಸ್.ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
