ಪುತ್ತೂರು: ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ನಿವಾಸಿಯಾದ ವೃದ್ಧರೊಬ್ಬರು ಉಪ್ಪಿನಂಗಡಿ ಬಳಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ಗುರುವಾರ ಸಂಭವಿಸಿದೆ. ಪತ್ತೂರು ಸಮೀಪದ ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ನಿವಾಸಿ ಬಾಬು ಗೌಡ(64) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
02
ಗುರುವಾರ ಬೆಳಿಗ್ಗೆ ಮನೆಯಿಂದ ಪೇಟೆಗೆ ತೆರಳಿದ ಬಾಬುಗೌಡ ಅಲ್ಲಿಂದ ನೇರವಾಗಿ ಉಪ್ಪಿನಂಗಡಿಗೆ ತೆರಳಿ ಕುಮಾರಧಾರ ಹಳೆ ಸೇತುವೆಯ ಮೇಲಿಂದ ನದಿಗೆ ಹಾರಿದರೆನ್ನಲಾಗಿದೆ.
ಬಾಬು ಗೌಡರು ಹೃದ್ರೋಗ ಹಾಗೂ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರೆಂದು ತಿಳಿದು ಬಂದಿದ್ದು, ಇದರಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By suddi9

Leave a Reply

Your email address will not be published. Required fields are marked *