ಸುದ್ದಿ9:ಮಂಗಳೂರು, ಏ.22-ಇಲ್ಲಿನ ಹೊರವಲಯದ ಸುರತ್ಕಲ್ ಸಮೀಪದ ಮುಕ್ಕಾದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ವಿದ್ಯಾಥರ್ಿಗಳು ಸೇರಿದಂತೆ 10 ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರು ಮೂಲದ ಟಾಟಾ ಸಿಯಾರ ಟೂರಿಸ್ಟ್ ಕಾರು ಹಾಗೂ ವಿಆರ್ಎಲ್ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಹಾಲಾಡಿಯ ನಿವಾಸಿಗಳಾದ ಸುಧಾಕರ್ (47), ಮಹೇಶ್ (27), ಪ್ರತಾಪ್ (22), ತೆಕ್ಕಟ್ಟೆಯ ನಿವಾಸಿ ಸತೀಶ್ (40), ಬೆಂಗಳೂರಿನ ನಿವಾಸಿ ದೇವರಾಜ್ (38) ಹಾಗೂ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ಕಾರಿನ ಚಾಲಕ ಶಿವಕುಮಾರ್ (25), ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರಿನ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಒಟ್ಟು ಆರು ಜನರು ಪ್ರಯಾಣಿಸುತ್ತಿದ್ದರು ಇವರಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಬಸ್ನಲ್ಲಿದ್ದ ಐವರು ಪ್ರಯಾಣಿಕರಿಗೂ ಸಹ ಗಾಯವಾಗಿದೆ ಎಂದು ಹೇಳಲಾಗಿದೆ. ಕಾರು ಕುಂದಾಪುರದಿಂದ ಬೆಂಗಳೂರಿನತ್ತ ಸಾಗುತ್ತಿದ್ದು ಹಾಗೂ ಬೆಂಗಳೂರಿನಿಂದ ಉಡುಪಿಯತ್ತ ತೆರಳುತ್ತಿದ್ದ ಬಸ್ ಡಿಕ್ಕಿ ಎದುರಿನಿಂದ ಹೊಡೆದಿದೆ ಎನ್ನಲಾಗಿದೆ.
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

