ಬಂಟ್ವಾಳ : ದ.ಕ.ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್ ಹಾಗೂ ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೊಳಪಟ್ಟ ಗ್ರಾ.ಪಂ.ಗಳ ಸಹಕಾರದೊಂದಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಗ್ರಾಮೀಣ ವಸತಿ ಯೋಜನೆಯ ಸಾಲ ಮನ್ನಾ ತಿಳುವಳಿಕೆ ಪತ್ರ ವಿತರಣೆ ಹಾಗೂ ಫಲಾನುಭವಿಗಳ ಸಮಾವೇಶ ಬಂಟ್ವಾಳ ತಾ.ಪಂ.ಕಛೇರಿ ವಠಾರದಲ್ಲಿ ಅ.5ರಂದು ಅಪರಾಹ್ನ 3ಕ್ಕೆ ಜರಗಲಿದೆ.
ರಾಜ್ಯ ಅರಣ್ಯ ಸಚಿವ ಬಿ. ರಮಾನಾಥ ರೈ ಅವರು ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿರುವರು. ಜಿ.ಪಂ.ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಸಂಸದ ನಳಿನ್ ಕುಮಾರ್ ಕಟೀಲು, ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ, ಉಪಾಧ್ಯಕ್ಷೆ ವಿಲಾಸಿನಿ, ಬಂಟ್ವಾಳ ತಾ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್, ದ.ಕ.ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅ„ಕಾರಿ ಪಿ.ಐ. ಶ್ರೀವಿದ್ಯಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಪ್ರಕಟನೆ ತಿಳಿಸಿದೆ.
