ವಿಟ್ಲ : ಬ್ಯಾರಿ ಭಾಷೆ, ಕಲೆ, ಸಂಸ್ಕ್ರತಿಯ ಕಂಪು ವಿಶ್ವದೆಲ್ಲೆಡೆ ಪಸರಿಸಲಿ ಎಂದು ಶಿಕ್ಷಕ ಬಿ.ಎಂ. ತುಂಬೆ ಆಶಯ ವ್ಯಕ್ತಪಡಿಸಿದರು.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೇರಳಕಟ್ಟೆ-ಗಣೇಶ ನಗರದಲ್ಲಿ ಶನಿವಾರ ನಡೆದ ಬ್ಯಾರಿ ಭಾಷಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬ್ಯಾರಿ ಭಾಷೆಗೆ ಸರಕಾರ ಅಧಿಕೃತ ಮುದ್ರೆಯೊತ್ತಿದ ಅಕ್ಟೋಬರ್ 3 ಬ್ಯಾರಿ ಭಾಷಿಗರಿಗೆ ಹಬ್ಬದ ದಿನವಾಗಿದೆ. ಬ್ಯಾರಿ ಭಾಷೆ, ಕಲೆ, ಸಾಹಿತ್ಯದ ಅಭಿವೃದ್ದಿಗಾಗಿ ಶ್ರಮಿಸಿದ ಸರ್ವರನ್ನೂ ನೆನಪಿಸುವ ಹಾಗೂ ಬ್ಯಾರಿ ಭಾಷೆಯನ್ನು ಇನ್ನಷ್ಟು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕಾಗಿದೆ ಎಂದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಅಬ್ದುಲ್ ಲತೀಫ್ ನೇರಳಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ನೆಟ್ಲಮುಡ್ನೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ರೇವತಿ, ನೇರಳಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ವೆಂಕಪ್ಪ ರೈ ಕುರ್ಲೆತ್ತಿಮಾರು, ಪರ್ಲೊಟ್ಟು ಅಬೂಬಕ್ಕರ್ ಸಿದ್ದೀಕ್ ಮಸೀದಿ ಅಧ್ಯಕ್ಷ ಕೆ.ಬಿ. ಕಾಸಿಂ ಹಾಜಿ, ನಿವೃತ್ತ ಮುಖ್ಯ ಶಿಕ್ಷಕ ರಾಮಚಂದ್ರ ಮಾಸ್ಟರ್, ಅನಂತಾಡಿ ಗ್ರಾ.ಪಂ. ಮಾಜಿ ಸದಸ್ಯ ಅಬ್ಬಾಸ್ ನೇರಳಕಟ್ಟೆ ಮುಖ್ಯ ಅತಿಥಿಗಳಾಗಿದ್ದರು.
ಮನ್ಸೂರ್ ಪಂತಡ್ಕ ಸ್ವಾಗತಿಸಿ, ಬದ್ರುದ್ದೀನ್ ವಂದಿಸಿದರು. ಶಾಹುಲ್ ಹಮೀದ್ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
