ಮೂಡಬಿದರೆ : ಪದವಿಪೂರ್ವ ಶಿಕ್ಷಣ ಇಲಾಖೆ ರಾಮನಗರ ಹಾಗೂ ಗ್ರಾಮೀಣ ಪದವಿಪೂರ್ವ ಕಾಲೇಜು, ಕನಕಪುರ ಇದರ ಆಶ್ರಯದಲ್ಲಿ ಅ.03, 04ರಂದು ಕನಕಪುರದಲ್ಲಿ ಜರುಗಿದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ತಂಡಗಳು ಅವಳಿ ಪ್ರಶಸ್ತಿ ಪಡೆದಿದೆ.

ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕರ ತಂಡವು ರಾಮನಗರ ಜಿಲ್ಲೆಯನ್ನು ಪ್ರತಿನಿಧಿಸಿದ ಗ್ರಾಮೀಣ ಪದವಿಪೂರ್ವ ಕಾಲೇಜು, ಕನಕಪುರವನ್ನು 37-15 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು. ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಬಾಲಕಿರ ತಂಡವು ಮೈಸೂರು ಜಿಲ್ಲೆಯನ್ನು ಪ್ರತಿನಿಧಿಸಿದ ಜೆ.ಎಸ್.ಎಸ್. ಪದವಿಪೂರ್ವ ಕಾಲೇಜನ್ನು 48-12 ಅಂಕಗಳಿಂದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.
