ಮಂಗಳೂರು: ರಾಜ್ಯ ಮಟ್ಟದ ಬೃಹತ್ ‘ಮಂಗಳೂರು ಉದ್ಯೋಗ ಮೇಳ’ವನ್ನು ಬಂಟ್ವಾಳದ ಬೆಂಜನಪದವಿನ ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ನವೆಂಬರ್ 19 ಮತ್ತು 20ರಂದು ಎರಡು ದಿನಗಳ ಕಾಲ ಅಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.
ಸೋಮವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗ ಮೇಳದ ಲಾಂಛನವನ್ನು ಬಿಡುಗಡೆಗೊಳಿಸಿದ ಅವರು ಮೇಳದ ಪೂರ್ವತಯಾರಿ ಕುರಿತಂತೆ ಹಿರಿಯ ಅಧಿಕಾರಿಗಳ ಜೊತೆ ಅವರು ಚರ್ಚಿಸಿದರು. ಮೇಳದಲ್ಲಿ ದ.ಕ. ಮತ್ತು ಉಡುಪಿಯ ಉದ್ಯೋ ಗಾಕಾಂಕ್ಷಿಗಳಿಗೆ ಪ್ರಥಮ ಆದ್ಯತೆ ನೀಡಬೇಕೆಂದು ಹೇಳಿದ ಅವರು, ವಿಭಿನ್ನ ಉದ್ಯೋಗ ಮೇಳವನ್ನಾಗಿಸಬೇಕೆಂದು ಅಧಿಕಾರಿಗಳಿಗೆ ರೈ ಸಲಹೆ ನೀಡಿದರು.
ಭಾಗವಹಿಸುವ ಎಲ್ಲ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸುವ ಕುರಿತಂತೆ ಕಾಳಜಿ ವಹಿಸಬೇಕು. ಈ ಹಿನ್ನೆಲೆಯಲ್ಲಿ ಉದ್ಯೋಗ ದಾತ ಕಂಪೆನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿ ಸುವಂತೆ ಮಾಡಲು ಬೆಂಗಳೂರು ಮತ್ತು ದುಬೈ ಯಲ್ಲಿ ಕಂಪೆನಿಗಳ ಆಡಳಿತ ನಿರ್ದೇಶಕರು ಅಥವಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಭೆಯನ್ನು ನಡೆಸಲಾ ಗುವುದು. ಅ.14ರಂದು ಬೆಂಗಳೂರಿನಲ್ಲಿ ಈ ಸಭೆ ನಡೆಯಲಿದೆ ಎಂದು ಸಚಿವ ರೈ ತಿಳಿಸಿದರು.
