ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣ-ನಿರ್ದೇಶನದಲ್ಲಿ ತಯಾರಾದ `ದಬಕ್ ದಬಾ ಐಸಾ’ ತುಳು ಚಲನ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಸುಮಾರು 22 ದಿನಗಳಲ್ಲಿ ಒಂದೇ ಹಂತದಲ್ಲಿ ಎರಡು ಕ್ಯಾಮಾರಾಗಳನ್ನು ಬಳಸಿ ಸಿನಿಮಾಕ್ಕೆ ಚಿತ್ರೀಕರಣ ನಡೆಸಲಾಗಿದೆ.
ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ತಯಾರಾದ ದಬಕ್ ದಬಾ ಐಸಾ ಚಿತ್ರ 22 ದಿನಗಳ ಕಾಲ ಒಂದೇ ಹಂತದಲ್ಲಿ ಮಂಗಳೂರು ಸುತ್ತಮುತ್ತ ಹಾಗೂ ಸುರತ್ಕಲ್, ಬೋಂದೆಲ್, ಕುಲಶೇಖರ, ಪಣಂಬೂರು, ತಣ್ಣೀರು ಬಾವಿ, ಮೂಲ್ಕಿ, ಕನ್ನಗುಡ್ಡೆ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದ್ದು, ದಬಕ್ ದಬಾ ಐಸಾ ಚಿತ್ರ ಸಂಪೂರ್ಣ ಮನೋರಂಜನಾತ್ಮಕ ಚಿತ್ರವಾಗಿದ್ದು, ಸಿನಿಮಾದಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಅಂಶಗಳಿವೆ.
ಶಶಿರಾಜ್ ಕಾವೂರು ಸಿನಿಮಾಕ್ಕೆ ಸಂಭಾಷಣೆ ಬರೆದಿದ್ದಾರೆ. ಛಾಯಾಗ್ರಹಣ: ಉತ್ಪಲ್ ವಿ.ನಯನಾರ್, ಸಂಗೀತ: ರಾಜೇಶ್ ಎಂ.ಮಂಗಳೂರು, ಕಲೆ: ತಮ್ಮ ಲಕ್ಷ್ಮಣ್, ಸಹ ನಿರ್ದೇಶನ ರಾಮ್ ದಾಸ್ ಸಸಿಹಿತ್ಲು, ಶಶಿರಾಜ್ ಕಾವೂರು, ಕಿಶೋರ್ ಮೂಡಬಿದ್ರೆ, ನಿರ್ಮಾಣ ನಿರ್ವಹಣೆ ಭವ್ಯ ಶೆಟ್ಟಿ. ಚಿತ್ರದಲ್ಲಿ ಒಟ್ಟು 4 ಹಾಡು ಇದ್ದು, ದೇವದಾಸ್ ಕಾಪಿಕಾಡ್, ವೀರೇಂದ್ರ ಶೆಟ್ಟಿ ಕಾವೂರು, ಕದ್ರಿ ನವನೀತ ಶೆಟ್ಟಿ, ಶಶಿರಾಜ್ ಕಾವೂರು ಸಾಹಿತ್ಯ ಒದಗಿಸಿದ್ದಾರೆ.
ಚಾಲಿಪೋಲಿಲು ತುಳು ಚಲನ ಚಿತ್ರದ ಬಳಿಕ ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಸುಂದರ ರೈ ಮಂದಾರ ಜತೆಯಾಗಿ ಅಭಿನಯಿಸಿದ್ದಾರೆ. ಮೊದಲ ಬಾರಿಗೆ ಶೀತಲ್ ಈ ಚಿತ್ರದ ಮೂಲಕ ನಾಯಕಿಯಾಗಿ ಅಭಿನಯಿಸಿದ್ದಾರೆ. ಡಾ.ಹನ್ಸರಾಜ್ ಆಳ್ವ, ಮತ್ತು ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನುಳಿದಂತೆ ಲಕ್ಷ್ಮಣ್ ಕುಮಾರ್ ಮಲ್ಲೂರು, ಸುರೇಂದ್ರ ಬಂಟ್ವಾಳ, ಗಿರೀಶ್ ಎಂ. ಶೆಟ್ಟಿ ಕಟೀಲು, ಸುಧೀರ್ ರಾಜ್ ಉರ್ವಾ, ಸರೋಜಿನಿ ಶೆಟ್ಟಿ, ಉಮೇಶ್ ಮಿಜಾರ್, ಪ್ರಸನ್ನ ಬೈಲೂರು, ರವಿ ಸುರತ್ಕಲ್, ಪ್ರದೀಪ್ ಆಳ್ವ ಕದ್ರಿ, ಸೋಮು ಜೋಗಟ್ಟೆ, ವಿಧ್ಯಾಶ್ರೀ, ಕವಿತಾ ದಿನಕರ್, ಶೋಭಾ ಶಕ್ತಿನಗರ, ಪ್ರಶಾಂತ್ ಕೊಂಚಾಡಿ, ಸದಾಶಿವದಾಸ್, ಮೋಹನ್ ಕೊಪ್ಪಲ, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಮನೋಹರ್ ಶೆಟ್ಟಿ ಸುರತ್ಕಲ್, ಬ್ರಿಜೇಶ್ ಗರೋಡಿ, ಪಿ.ಬಿ.ಹರೀಶ್ ರೈ, ದಯಾ ಕುಕ್ಕಾಜೆ, ಯಶವಂತ್ ಶೆಟ್ಟಿ ಕೃಷ್ಣಾಪುರ, ಚೇತಕ್ ಪೂಜಾರಿ, ವಿನೋದ್ ಎಕ್ಕೂರು, ಶಶಿಧರ್ ಬೆಳ್ಳಾಯರು, ನರೇಶ್ ಸಸಿಹಿತ್ಲು, ಸುನೀಲ್ ಕೃಷ್ಣಾಪುರ, ರಾಜೇಶ್ ಶೆಟ್ಟಿ, ಪ್ರವೀಣ್ ನೀರ್ ಮಾರ್ಗ ವಿನಯ ಕೃಷ್ಣ, ಚಂದ್ರಹಾಸ ಕದ್ರಿ ಮೊದಲಾದವರು ಅಭಿನಯಿಸಿದ್ದಾರೆ.



