ಬಂಟ್ವಾಳ: ಕಟ್ಟಡ ನಿರ್ಮಾಣದ ಸೆಂಟ್ರಿಂಗ್ ತಗಡು ಶೀಟ್ ಗಳನ್ನು ಕಳವು ಗೈದ ಆರೋಪದಲ್ಲಿ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಂಧಿತರನ್ನು ಕಾವಳಕಟ್ಟೆ ನಿವಾಸಿಗಳಾದ ಅಬ್ದುಲ್ ಹಝೀಝ್, ಇಸ್ಮಾಯಿಲ್ ಹಾಗೂ ಹರಿಶ್ಚಂದ್ರ ನಾಯಕ್ ಎಂದು ಗುರುತಿಸಲಾಗಿದೆ.
Untitled-1 copy
ಕಾವಳಕಟ್ಟೆ ಹಾಗೂ ವಗ್ಗ ಪರಿಸರದಿಂದ 100 ಸೆಂಟ್ರಿಂಗ್ ಶೀಟ್ ಗಳನ್ನು ಕಳವಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶನಿವಾರ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳವು ಗೈದ ಸೊತ್ತಿನ ಮೌಲ್ಯ ಸುಮಾರು 1 ಲಕ್ಷ ಎಂದು ಅಂದಾಜಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕೆ ಹಾಜುರಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ ರಕ್ಷಿತ್ ಗೌಡ, ಸಿಬ್ಬಂದಿಗಳಾದ ಜಗದೀಶ್, ಪ್ರಶಾಂತ್, ಲಕ್ಷ್ಮಣ್ ಹಾಗೂ ಪ್ರವೀಣ್ ಭಾಗವಹಿಸಿದ್ದರು.

By Suddi9

Leave a Reply

Your email address will not be published. Required fields are marked *