ಮೂಡುಬಿದಿರೆ: ಯುವಕರಲ್ಲಿ ರಾಷ್ಟ್ರಪ್ರೇಮ, ರಾಷ್ಟ್ರೀಯ ಭಾವೈಕ್ಯತೆ ಅರಿವು, ನಾಯಕತ್ವದ ಸರಿಯಾದ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್‍ನ ವಿದ್ಯಾರ್ಥಿ ಘಟಕವಾದ ಎನ್‍ಎಸ್‍ಯುಐ ಬಲವರ್ಧನೆಗೊಳಿಸುತ್ತೇವೆ. ಯುವಕರಿಗೆ ನಾಕತ್ವ ಶಿಬಿರ, ಸಾಮಾಜಿಕ ಜಾಲ ತಾಣಗಳ ಮೂಲಕ ಯಾವ ರೀತಿ ಸಮಾಜಮುಖಿಯಾಗಬಹುದು ಎನ್ನುವ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಕೈಗೊಂಡು ಕಾಂಗ್ರೆಸ್ ಪಕ್ಷವನ್ನು ಪ್ರಬಲಗೊಳಿಸುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
17 ರಂದು ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ಎನ್‍ಎಸ್‍ಯುಐ ಕಾರ್ಯಕರ್ತರಿಗೆ ನಡೆಯುವ ವಿಚಾರ ಸಂಕಿರಣವದ ಪ್ರಚಾರದಂಗವಾಗಿ ಮೂಡುಬಿದಿರೆ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಎನ್‍ಎಸ್‍ಯುಐ ಜಿಲ್ಲಾಧ್ಯಕ್ಷ ಆಶಿತ್ ಜಿ. ಪಿರೇರಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೇಘನಾದ ಶೆಟ್ಟಿ, ಪುರಸಭೆ ಅಧ್ಯಕೆ ರೂಪಾ ಎಸ್. ಶೆಟ್ಟಿ, ಉಪಾಧ್ಯಕ್ಷೆ ಶಕುಂತಳಾ ಹೆಚ್. ದೇವಾಡಿಗ, ಮಾಜಿ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ, ಮೂಡಾ ಅಧ್ಯಕ್ಷ ಸುರೇಶ್ ಕೋಟ್ಯಾನ್, ಸದಸ್ಯ ಸುರೇಶ್ ಪ್ರಭು, ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ, ಮಾಜಿ ಅಧ್ಯಕ್ಷ ಅಬ್ದುಲ್ ಬಶೀರ್ ಕಾಂಗ್ರೆಸ್ ಮುಖಂಡರಾದ ಅಲ್ವಿನ್ ಡಿಸೋಜ, ಅಲ್ವಿನ್ ಮೆನೇಜಸ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಶಾಂತ್ ಹತ್ಯೆಗೆ ಖಂಡನೆ
ಪ್ರಶಾಂತ್ ಪೂಜಾರಿ ಕೊಲೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಆರೋಪಿಗಳನ್ನು ಬಂಧಿಸಲು ಹಾಗೂ ಮೃತನ ಕುಟುಂಬಕ್ಕೆ ಪರಿಹಾರ ನೀಡಲು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಐವನ್ ಡಿ’ಸೋಜಾ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *