ಬೆಂಗಳೂರು21: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ಸಮಾಜಮುಖಿ ಕಾರ್ಯಕ್ರಮಗಳನ್ನು ಅವಹೇಳನಕಾರಿಯಾಗಿ ಬಿಂಬಿಸುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಇಂದುಗುರುವಾಯನಕೆರೆ ನಾಗರಿಕ ಸೇವಾ ಸಮಿತಿ ಮತ್ತು ಸಮಾನಾಸಕ್ತ ಸಂಘಟನೆಗಳ ನಿಯೋಗವೊಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು.

DSC_0944

Nagaraika Seva Samithi

ಹೆಗ್ಗಡೆಯವರ ವಿರುದ್ಧ ಅಪಪ್ರಚಾರ ಮಾಡದಂತೆ ಬೆಳ್ತಂಗಡಿ ಮುನ್ಸಿಫ್ಕೋರ್ಟಿನ ತಡೆಯಾಜ್ಞೆಯಿದ್ದರೂ ದಿನಕ್ಕೊಂದು ಹೊಸ ಸುಳ್ಳನ್ನು ಹರಡುತ್ತಿರುವ  ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಿಯೋಗವು ಬೆಳ್ತಂಗಡಿ ಶಾಸಕರಾದ ಕೆ.ವಸಂತ ಬಂಗೇರವರನ್ನು ವಿಧಾನ ಸೌಧದಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು ನಂತರ ನಿಯೋಗದ ಕೋರಿಕೆಯಂತೆ ಮಾನ್ಯ ಶಾಸಕರು ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ದ.ಕ. ಜಿಲ್ಲೆಯಲ್ಲಿ ಕ್ರಮಕೈಗೊಳ್ಳಬೇಕಾದ ಜನರೇ ನಿಷ್ಕ್ರಿಯರಾಗಿದ್ದು, ಇದರಿಂದಾಗಿ ರಾಜ್ಯದಲ್ಲಿ ಧರ್ಮಸ್ಥಳದ ಕೋಟ್ಯಾಂತರ ಭಕ್ತಾಧಿಗಳಲ್ಲಿ ಕ್ಷೊಭೆಯುಂಟಾಗಿದೆ. ಇದು ಉಗ್ರ ಪ್ರತಿಭಟನೆಗೆ ತಿರುಗಬಹುದೆಂಬ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು. ಮಾನ್ಯ ಮುಖ್ಯಮಂತ್ರಿಗಳು ನಮ್ಮ ಮನವಿಯನ್ನು ಸ್ವೀಕರಿಸಿ ಗೃಹ ಇಲಾಖೆಗೆ ಸೂಕ್ತ ಕ್ರಮಕ್ಕಾಗಿ ಆದೇಶಿಸಿರುತ್ತಾರೆ.

ಅಖಿಲ ಕರ್ನಾಟಕಜನಜಾಗೃತಿ ವೇದಿಕೆ ಅಧ್ಯಕ್ಷ, ಹಲವಾರು ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ಗುರುವಾಯನಕೆರೆ ನಾಗರಿಕ ಸೇವಾ ಸಮಿತಿ ಪದಾಧಿಕಾರಿಗಳು ನಿಯೋಗದಲ್ಲಿ ಪಾಲ್ಗೊಂಡು ಮುಖ್ಯಮಂತ್ರಿಗಳಿಗೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟರು.

By suddi9

Leave a Reply

Your email address will not be published. Required fields are marked *