ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಝಾದಲ್ಲಿ ಶನಿವಾರ ಬೆಳಿಗ್ಗೆ ಕಿಡಿಗೇಡಿಗಳ ದಾಂದಲೆಯ ಬಳಿಕ ಸ್ಥಗಿತಗೊಂಡಿದ್ದ ವಾಹನ ಶುಲ್ಕ ಸಂಗ್ರಹಣೆಯನ್ನು ಭಾನುವಾರ ಸಂಜೆಯ ಬಳಿಕ ಮತ್ತೆ ಆರಂಭಿಸಲಾಗಿದೆ ಎಂದು ಟೋಲ್ಗುತ್ತಿಗೆದಾರ ಗೋಪಾಲಕೃಷ್ಣ ಮೇಲಾಂಟ ತಿಳಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮೀಸಲು ಪೊಲೀಸ್ ಪಡೆಯನ್ನು ಒದಗಿಸುವುದಾಗಿ ಗುತ್ತಿಗೆದಾರರಿಗೆ ತಿಳಿಸಿರುವುದರಿಂದ ಭಾನುವಾರ ಸಂಜೆಯಿಂದ ವಾಹನ ಶುಲ್ಕ ಸಂಗ್ರಹಿಸುವುದಾಗಿ ಅವರು ತಿಳಿಸಿದ್ದಾರೆ. ಕಿಡಿಗೇಡಿಗಳ ದಾಂದಲೆಯಿಂದ ಹಾನಿಗೊಂಡಿರುವ ಟೋಲ್ಪ್ಲಾಝದಲ್ಲಿ ಈಗಾಗಲೇ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಹಾನಿಗೊಂಡಿರುವ ವಸ್ತುಗಳ ದುರಸ್ತಿ ಕಾರ್ಯ ನಡೆಯುತ್ತಿದೆ.

By suddi9

Leave a Reply

Your email address will not be published. Required fields are marked *