ಬಂಟ್ವಾಳ: ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳನ್ನು ದೇಶದ ಸತ್ಪ್ರಜೆಗಳಾಗಿ ರೂಪಿಸಲು ಸೂಕ್ತ ವೇದಿಕೆ ಒದಗಿಸಿ ಕೊಡುತ್ತದೆ. ಆ ಮೂಲಕ ವಿದ್ಯಾರ್ಥಿಗಳು ಬದುಕಿನ ಪಾಠವನ್ನೂ ಅರಿತುಕೊಂಡು ಜೀವನದಲ್ಲಿ ಸದ್ಗುಣಗಳನ್ನು ಅಳವಡಿಸಿಕೊಳ್ಳಲು ಸಾಧ್ಯವಿದೆ ಎಂದು ಬಿ.ಸಿ.ರೋಡ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಸರಸ್ವತಿ ಬಿ. ಹೇಳಿದ್ದಾರೆ.
ತಾಲ್ಲೂಕಿನ ಬಿ.ಸಿ.ರೋಡ್ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಸರಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಏಳುದಿನಗಳ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿರಿಯ ಹೋರಾಟಗಾರ ಎನ್.ಸುಬ್ಬಣ್ಣ ಶೆಟ್ಟಿ, ಸರಪಾಡಿ ಯುವಕ ಮಂಡಲ ಅಧ್ಯಕ್ಷ ಎಸ್.ಪಿ.ಸರಪಾಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್, ಉಪಾಧ್ಯಕ್ಷೆ ದಿವ್ಯ, ಮಾಜಿ ಅದ್ಯಕ್ಷ ವಿಶ್ವನಾಥ ಶೆಟ್ಟಿ, ವಸಂತ ಪೂಜಾರಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಿಶ್ವನಾಥ ನಾಯ್ಕ, ಸರಪಾಡಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಉದಯಕುಮಾರ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಗಣೇಶ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ಎನ್.ಧನಂಜಯ ಶೆಟ್ಟಿ ಮತ್ತಿತರರು ಶುಭ ಹಾರೈಸಿದರು.
ಉಪನ್ಯಾಸಕಿ ಯಶೋದ.ಕೆ ಸ್ವಾಗತಿಸಿ, ಯೋಜನಾಧಿಕಾರಿ ಕೆ.ಬಾಲಕೃಷ್ಣ ನಾಯ್ಕ ವಂದಿಸಿದರು. ದಾಮೋದರ ಇ. ವರದಿ ವಾಚಿಸಿದರು. ಸಹ ಶಿಬಿರಾಧಿಕಾರಿ ಅಬ್ದುಲ್ ರಝಾಕ್ ಕಾರ್ಯಕ್ರಮ ನಿರೂಪಿಸಿದರು. .

By suddi9

Leave a Reply

Your email address will not be published. Required fields are marked *