ಮೂಡುಬಿದಿರೆ: ಪ್ರಶಾಂತ್ ಪೂಜಾರಿ ಹತ್ಯೆ ಹಿನ್ನೆಲೆಯಲ್ಲಿ ಉದ್ಯಮಿ ಅಬುಲ್ ಅಲಾ ಪುತ್ತಿಗೆ ಮತ್ತು ಅವರ ಕುಟುಂಬದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತೇಜೋವಧೆ ಮಾಡುವ ಸುದ್ದಿಗಳನ್ನು ಹರಡಿದವರ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
`ನಾನು ರೋಲಿಂಗ್ ಶಟರ್ ಉದ್ಯಮವನ್ನು ನಡೆಸುಕೊಂಡು ಬಂದಿರುತ್ತೇನೆ. ಸಾರ್ವಜನಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು ಎಲ್ಲ ಧರ್ಮದ ಜನರೊಂದಿಗೆ ಆತ್ಮೀಯತೆಯಿಂದಿದ್ದೇನೆ. ಆದರೆ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣದಲ್ಲಿ ಕೆಲ ವ್ಯಕ್ತಿಗಳು ನನ್ನ ಹೆಸರನ್ನು ಅನಾವಶ್ಯಕವಾಗಿ ಎಳೆದು ತಂದಿದ್ದಾರೆ. ಕೃತ್ಯಕ್ಕೆ ನಾನು ಹಣಕಾಸು ನೆರವು ನೀಡಿದ್ದೇನೆಂದು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಅಪಪ್ರಚಾರ ಮಾಡಿ ನನ್ನ ಹಾಗೂ ಕುಟುಂಬದ ವಿರುದ್ಧ ವೈಯಕ್ತಿಕ ತೇಜೋವಧೆ ಮಾಡಿ ಮಾನಸಿಕ ಘಾಸಿ ಉಂಟುಮಾಡಿರುತ್ತಾರೆ. ಪ್ರಶಾಂತ್ ಕೊಲೆಗು ನನಗು  ಯಾವುದೇ ಸಂಬಂಧವಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ನನ್ನ ವಿರುದ್ಧ ಸುಳ್ಳು ಆರೋಪಹೊರಿಸಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ರವಾನಿಸುತ್ತಿರುವವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅಬುಲ್ ಅಲಾ ಶನಿವಾರ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ನಡೆಯುತ್ತಿದೆ.

By suddi9

Leave a Reply

Your email address will not be published. Required fields are marked *