ಬಂಟ್ವಾಳ:ತಾಲ್ಲೂಕಿನ ಅರಳ ಎಂಬಲ್ಲಿ ಪ್ರಗತಿಪರ ಕೃಷಿಕ ದಿವಂಗತ ನಾರಾಯಣ ಸಪಲ್ಯ ಎಂಬವರ ಪತ್ನಿ ನಾಗಮ್ಮ(80) ಇವರು ವಿಷ ಸೇವಿಸಿ ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಮನೆಯಲ್ಲಿ ಪುತ್ರ ಮತ್ತು ಸೊಸೆ ಮಲಗಿದ್ದ ವೇಳೆ ವಿಷ ಪದಾರ್ಥ ಸೇವಿಸಿದ್ದರು ಎನ್ನಲಾಗಿದೆ. ಇದೇ ವೇಳೆ ಇವರ ಬಾಯಿಯಲ್ಲಿ ನೊರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ರಾತ್ರಿ ಸುಮಾರು 1 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.
