ಬಂಟ್ವಾಳ:ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಎದುರಿಸಲು ಉಂಟಾಗುವ ಆತಂಕ ಮತ್ತು ಭಯ ದೂರ ಮಾಡಲು ಸ್ವತಃ ಆತ್ಮವಿಶ್ವಾಸ ಮತ್ತು ಏಕಾಗ್ರತೆ ರೂಢಿಸಿಕೊಳ್ಳುವುದರ ಜೊತೆಗೆ ನಿರಂತರವಾಗಿ ಸಾಧನಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ಉಪನ್ಯಾಸಕ ಪ್ರೊ.ವೃಷಭರಾಜ್ ಜೈನ್ ಹೇಳಿದ್ದಾರೆ.

ತಾಲ್ಲೂಕಿನ ಬಿ.ಸಿ.ರೋಡ್ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ವತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬುಧವಾರ ಏರ್ಪಡಿಸಿದ್ದ ‘ಪರೀಕ್ಷಾ ಪೂರ್ವ ತರಬೇತಿ’ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲೆ ಸರಸ್ವತಿ ಬಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರಯುತ ಜೀವನ ಪದ್ಧತಿ ಅರಿತುಕೊಳ್ಳಬೇಕು ಎಂದರು.
ಎನ್ಎಸ್ಎಸ್ ಯೋಜಾನಾಧಿಕಾರಿ ಕೆ.ಬಾಲಕೃಷ್ಣ ನಾಯ್ಕ ಮತ್ತಿತರರು ಇದ್ದರು.
ವಿದ್ಯಾರ್ಥಿನಿ ಪೂಜಾಶ್ರೀ ಕೆ. ಸ್ವಾಗತಿಸಿ, ಮಹಮ್ಮದ್ ಶಪ್ರುದ್ದೀನ್ ವಂದಿಸಿದರು. ಗೌತಮಿ ಕಾರ್ಯಕ್ರಮ ನಿರೂಪಿಸಿದರು.
