ಮೂಡುಬಿದಿರೆ: ಇರುವೈಲ್ ಕೊನ್ನೆಪದವು ಬಳಿ ಯುವಕರ ನಡುವೆ ಪರಸ್ಪರ ಹಲ್ಲೆ ನಡೆದಿದ್ದು, ಇತ್ತಂಡಗಳಲ್ಲಿದ್ದ ನಾಲ್ಕು ಮಂದಿ ಗಾಯಗೊಂಡಿದ್ದಾರೆ.
ಹಿಂದೂ ಸಂಘಟನೆಯಲ್ಲಿ ಸಕ್ರಿಯರಾಗಿರುವ ಸುನೀಲ್ ಹಾಗೂ ಯಶೋಧರ್ ಎಂಬವರು ಇರುವೈಲ್ ಪರಿಸರದಲ್ಲಿ ಕಳೆದ ಕೆಲವು ತಿಂಗಳಿನಿಂದ ಮೀನು ವ್ಯಾಪಾರ ನಡೆಸುತ್ತಿದ್ದರು. ಶನಿವಾರ ಮಧ್ಯಾಹ್ನದ ವೇಳೆ ಇವರಿಬ್ಬರು ಇರುವೈಲಿನ ಕೊನ್ನೆಪದವಿನಲ್ಲಿ ಮೀನು ವ್ಯಾಪಾರ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಬೈಕ್ನಲ್ಲಿ ಬಂದ ಯುವಕರಿಬ್ಬರು ಮೀನಿನ ಗಾಡಿಗೆ ಅಡ್ಡಗಟ್ಟಿದ್ದು, ಈ ಸಂದರ್ಭ ಮಾತಿನ ಚಕಮಕಿ ನಡೆದಿದೆ. ಬಳಿಕ ಪರಸ್ಪರ ಹಲ್ಲೆ ನಡೆದಿದ್ದು, ನಾಲ್ಕು ಜನರು ಕೂಡ ಆಶ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

By Suddi9

Leave a Reply

Your email address will not be published. Required fields are marked *