ಬಂಟ್ವಾಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹಸಿರು ಶಾಲಾವನಕ್ಕೆ ರಾಜ್ಯದಲ್ಲೇ ಪ್ರಥಮ ಎಂಬಂತೆ ಸರಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಗಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಮುಂದಿನ ದಿನಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ರಾಜ್ಯ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿರ.ರಮಾನಾಥ ರೈ ಹೇಳಿದರು.
ಅವರು ಶನಿವಾರ ಅರಣ್ಯ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಸರಪಾಡಿ ಇದರ ಜಂಟಿ ಆಶ್ರಯದಲ್ಲಿ ಹಸಿರುಶಾಲಾ ವನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರ್ಕಾರವು ಪರಿಸರದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಚಿಣ್ಣರ ಅರಣ್ಯ ದರ್ಶನ ಯೋಜನೆಯನ್ನು ಹಾಕಿಕೊಂಡಿದ್ದು, ಈ ಯೋಜನೆಯಡಿ ರಾಜ್ಯದ 10 ಸಾವಿರ ಮಕ್ಕಳನ್ನು ಆಯ್ಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಗದಗ ಜಿಲ್ಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು.
ಸರಪಾಡಿ ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಸಂಪತ್ ಕುಮಾರ್ ಶೆಟ್ಟಿ, ಪದ್ಮಶೇಖರ ಜೈನ್, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್ ಮಣಿನಾಲ್ಕೂರು ಗ್ರಾ.ಪಂ ಅಧ್ಯಕ್ಷೆ ಗೀತಾ ಶ್ರೀಧರ ಪೂಜಾರಿ,ಮಂಗಳೂರು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಬಿಜೂರು, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಟಿ.ಹನುಮಂತಪ್ಪ, ಎಸಿಎಫ್ ಎ.ಎಸ್. ಅಬ್ಬಾಸ್, ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಪದ್ಮಪ್ಪ ಪೂಜಾರಿ, ಮಣಿನಾಲ್ಕೂರು ಗ್ರಾ.ಪಂ.ಉಪಾದ್ಯಕ್ಷ ದಿನೇಶ್, ಗ್ರಾ.ಪಂ.ಸದಸ್ಯರುಗಳಾದ ನಾಣ್ಯಪ್ಪಪೂಜಾರಿ, ಪ್ರೇಮ, ಧನಂಜಯ ಶೆಟ್ಟಿ, ಪದ್ಮಾವತಿ, ದಯಾನಂದ ಶೆಟ್ಟಿ ಅಮೈ, ಶಿವಪ್ಪಪೂಜಾರಿ, ವೇದ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿಸಚಿವ ರೈ ಹಾಗೂ ಸಂಜಯ್ ಬಿಜೂರು ಅವರನ್ನು ಸನ್ಮಾನಿಸಲಾಯಿತು.
ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ರಾವ್ ಸ್ವಾಗತಿಸಿದರು. ಶಾಲಾಭಿವೃದ್ದಿ ಸಮಿತಿ ಸದಸ್ಯ ರಿಚಾರ್ಡ್ ಡಿಸೋಜಾ ಪ್ರಸ್ತಾವಿಸಿದರು. ಮುಖ್ಯ ಶಿಕ್ಷಕ ಉದಯ ಕುಮಾರ್ ವರದಿ ವಾಚಿಸಿದರು. ಶಿಕ್ಷಕಿ ವನಿತ ವಂದಿಸಿದರು.
