ಬಂಟ್ವಾಳ: ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಬಿಪಿಎಲ್ ಕುಟುಂಬ ಮತ್ತು ತೀರಾ ಹಿಂದುಳಿದ ಸಮಾಜವನ್ನು ಸ್ವಾವಲಂಬಿಯನ್ನಾಗಿಸಲು ವಿವಿಧ ಯೋಜನೆಗಳನ್ನು ಕೈಗೆತ್ತಿಕೊಂಡು ಈಗಾಗಲೇ ತ್ವರಿತವಾಗಿ ಅನುಷ್ಠಾನಗೊಳಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ಬಂಟ್ವಾಳ ಪುರಸಭೆ ವತಿಯಿಂದ ಅರ್ಹ ಬಿಪಿಎಲ್ ಕಟುಂಬಗಳ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ಸಿಲಿಂಡರ್ ಸಹಿತ ಸಂಪರ್ಕ ಸಾಮಾಗ್ರಿ ಮತ್ತು ಆಶ್ರಯ ಯೋಜನೆಯಡಿ ಸಾಲ ಮನ್ನಾ ಫಲಾನುಭವಿಗಳಿಗೆ ವಿವಿಧ ಮಂಜೂರಾತಿ ಪತ್ರವನ್ನು ಭಾನುವಾರ ವಿತರಿಸಿ ಅವರು ಮಾತನಾಡಿದರು.
11btl-Purasabheಇದೇ ವೇಳೆ ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ಪ್ರೋತ್ಸಹಧನ ವಿತರಿಸಲಾಯಿತು.
ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬೂಡ ಅಧ್ಯಕ್ಷ ಪಿಯೂಸ್ ಎಲ್. ರೊಡ್ರಿಗಸ್, ಪುರಸಭೆ ಉಪಾಧ್ಯಕ್ಷೆ ಯಾಸ್ಮಿನ್, ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *