ಮೂಡುಬಿದರೆ: ಆಟೋ ರಿಕ್ಷಾ ಮಾಲಕ- ಚಾಲಕರ ಸಂಘದ ವತಿಯಿಂದ ಬುಧವಾರ ರಾತ್ರಿ ಸಮಾಜ ಮಂದಿರದ ಬಳಿ ಶ್ರೀ ಧನಲಕ್ಷ್ಮೀ ಪೂಜೆ ಹಾಗೂ ವಾಹನ ಪೂಜೆ ನಡೆಯಿತು.
ಸಚಿವ ಕೆ.ಅಭಯಚಂದ್ರ ಜೈನ್, ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಪಿ.ಜಗದೀಶ ಅಧಿಕಾರಿ, ಮೂಡಾ ಅಧ್ಯಕ್ಷ ಸುರೇಶ್ ಕೋಟ್ಯಾನ್, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ, ಉದ್ಯಮಿ ತೋಡಾರು ದಿವಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಆಟೋ ರಿಕ್ಷಾ ಮಲಕ-ಚಾಲಕರ ಸಂಘದ ಅಧ್ಯಕ್ಷ ಭಾಸ್ಕರ ಆಚಾರ್ಯ, ಕಾರ್ಯದರ್ಶಿ ಸಂತೋಷ್ ಆರ್.ಶೆಟ್ಟಿ, ಕೋಶಾಧಿಕಾರಿ ಪ್ರಕಾಶ್ ಆಂಚನ್ ಹಾಗೂ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಚಾಲಕ ಕೆ.ಪ್ರದೀಪ್ ರೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
