ಬಂಟ್ವಾಳ; ಹದಿಹರೆಯದ ಹೆಣ್ಣುಮಕ್ಕಳು ತಮ್ಮ ದೈಹಿಕ, ಮಾನಸಿಕ ಹಾಗೂ ಶಾರೀರಿಕ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು, ಈನಿಟ್ಟಿನಲ್ಲಿ ಸರ್ಕಾರ ಕಿಶೋರಿ ಶಕ್ತಿ ತರಬೇತಿಯ ಮೂಲಕ ಕಿಶೋರಿಯರಲ್ಲಿ ದೈರ್ಯ ತುಂಬುವ ಕಾರ್ಯ ನಡೆಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸುಂದರ ಪೂಜಾರಿ ಹೇಳಿದ್ದಾರೆ.

DSC_9143
ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ , ಸಮಗ್ರ ಶಿಶು ಅಭಿವೃದ್ದಿ ಸೇವಾ ಯೋಜನೆ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಆಶ್ರಮ ಶಾಲೆಯಲ್ಲಿ ಆರಂಭಗೊಂಡ 5 ದಿನಗಳ ಕಿಶೋರಿಯರ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೌಷ್ಠಿಕಾಂಶಯುತವಾದ ಆಹಾರವನ್ನು ಸೇವಿಸುವ ಮೂಲಕ ದೈಹಿಕ ಆರೋಗ್ಯವನ್ನು ಸಧೃಡಗೊಳಿಸಬೇಕು, ಆಗ ಮಾನಸಿಕವಾಗಿಯೂ ನಾವು ಗಟ್ಟಿಗೊಳ್ಳಲು ಸಾಧ್ಯ ಎಂದವರು ಅಭಿಪ್ರಾಯಪಟ್ಟರು.
ಬಂಟ್ವಾಳ ಶಿಶುಅಭಿವೃದ್ದಿ ಯೋಜನಾಧಿಕಾರಿ ಮಲ್ಲಿಕಾ, ಬಾಲವಿಕಾಸ ಅಕಾಡೆಮಿಯ ಜಿಲ್ಲಾ ಸಮಿತಿ ಸದಸ್ಯ ಮೌನೇಶ ವಿಶ್ವಕರ್ಮ, ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಅನ್ನಪೂರ್ಣ, ಮೇಲ್ವಿಚಾರಕಿ ಸರೋಜಾಭಟ್, ನೀತಾ ವೇದಿಕೆಯಲ್ಲಿದ್ದರು. ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಸ್ವಾಗತಿಸಿ, ಕಾತ್ಯಾಯಿನಿ ವಂದಿಸಿದರು. ಭಾರತಿ ನಿರೂಪಿಸಿದರು

By suddi9

Leave a Reply

Your email address will not be published. Required fields are marked *