ಬಂಟ್ವಾಳ: ಉತ್ತಮ ಆರೋಗ್ಯ, ಶಿಸ್ತು ಮತ್ತು ಸಂಸ್ಕಾರಯುತವಾದ ಶಿಕ್ಷಣ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರ ಸಿಗಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಹೇಳಿದರು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ಸಮನ್ವಯ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಕೈಕುಂಜೆ ಅಂ. ಕೇಂದ್ರದಲ್ಲಿ ನಡೆದ ಮಕ್ಕಳ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು ಹೆಚ್ಚು ಕ್ರೀಯಾಶೀಲರಾಗಲು ಅಂ. ಕೇಂದ್ರಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

DSC_0202
ವೇದಿಕೆಯಲ್ಲಿ ಪುರಸಭಾ ಸದಸ್ಯೆ ಸುಗುಣ ಕಿಣಿ, ಪ್ರಮುಖರಾದ ರಮೇಶ್ ಸಾಲ್ಯಾನ್, ಶಿವರಾಜ್ ಉಪಸ್ಥಿತರಿದ್ದರು.
ಅಂ. ಕಾರ್ಯಕರ್ತೆ ವಾಣಿ ಸ್ವಾಗತಿಸಿ, ವಂದಿಸಿದರು.

By Suddi9

Leave a Reply

Your email address will not be published. Required fields are marked *