ಬಂಟ್ವಾಳ: ಸೋರ್ನಾಡು, ಸಂತ ಅ್ಯಂಡ್ರೂಸ್ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಲೊರೆಟ್ಟೊ ಅಗ್ರಾರ್ ಲಯನ್ಸ್ ಕ್ಲಬ್ಬಿನ ಸಹಯೋಗದೊಂದಿಗೆ ನಡೆದ ಮಕ್ಕಳ ದಿನಾಚರಣೆ ಮತ್ತು ಮಕ್ಕಳ ಪ್ರತಿಭಾ ಪುರಸ್ಕಾರ ದಿನಾಚರಣೆ ಕಾರ್ಯಕ್ರಮವನ್ನು ಲೊರೆಟ್ಟೊ ಅಗ್ರಾರ್ ಲಯನ್ಸ್ ಕ್ಲಬ್ಬಿನ ಅಧ್ಯಕ್ಷ ಎಡ್ವರ್ಡ್ ಪಿಂಟೋ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ಲಯನ್ಸ್ ಕ್ಲಬ್ಬಿನ ಕಾರ್ಯದರ್ಶಿ ರೋಯ್ ಕಾರ್ಲೊ ಲಯನ್ಸ್ ಸಂಪುಟ ಸದಸ್ಯೆ ಆಶಾ ಫೆರ್ನಾಂಡಿಸ್, ಪಂಜಿಕಲ್ಲು ಗ್ರಾ.ಪಂ. ಸದಸ್ಯ ಬಾಲಕೃಷ್ಣ ಪೂಜಾರಿ, ಸೊರ್ನಾಡು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಸದಾನಂದ ಮೂಲ್ಯ, ಉದ್ಯಮಿ ಚಾಲ್ರ್ಸ ಮಾರ್ಟಿನ್, ಶಾಲಾ ಮುಖ್ಯೋಪಾಧ್ಯಾಯಿನಿ ಜೊಸ್ಫಿನ್ ರೊಡ್ರಿಗಸ್ ಮತ್ತು ಸಹಶಿಕ್ಷಕರು ಉಪಸ್ಥಿತರಿದ್ದರು.
