ಮೂಡುಬಿದರೆ: 12ನೇ ವರ್ಷದ ಆಳ್ವಾಸ್ ನುಡಿಸಿರಿಗೆ 52 ಸಾಂಸ್ಕೃತಿಕ ಕಲಾ ತಂಡಗಳು ಉದ್ಘಾಟನಾ ಸಮಾರಂಭದ ಪ್ರಾರಂಭದಲ್ಲಿ ಸಾಂಸ್ಕೃತಿಕ ಮೆರವಣಿಗೆಗೆ ವಿಶೇಷ ಮೆರಗು ನೀಡಿತು.
RAV_4600

RAV_4561

RAV_4573

RAV_4585

800 ಕಲಾವಿದರು:
ರಾಜ್ಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲಾತಂಡಗಳಲ್ಲಿ ಎಂಟುನೂರಕ್ಕು ಹೆಚ್ಚಿನ ಕಲಾವಿದರನ್ನೊಳಗೊಂಡ ಕಲಾ ತಂಡಗಳೊಂದಿಗೆ ಸಾಂಸ್ಕೃತಿಕ ಮೆರವಣಿಗೆಯು ನೂತನ ವೇದಿಕೆ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯ ಎಡಭಾಗದಿಂದ ಸಂಜೆ 5.30ಕ್ಕೆ ಹೊರಟಿತು. ಆಕರ್ಷಕ ಸಿಡಿಮದ್ದುಗಳು ಸಿಡಿಯುತ್ತಿದ್ದಂತೆ ಒಂದೊಂದೆ ಕಲಾತಂಡಗಳು ಪ್ರದರ್ಶನ ನೀಡುತ್ತಾ ಮುಂದೆ ಸಾಗಿದವು. ಕೆಎಸ್ಆರ್ಪಿ ತಂಡದ ಬ್ಯಾಂಡ್ ಸೆಟ್, ನಂದಿ ಧ್ವಜ, ತಟ್ಟಿರಾಯ ಕುಣಿತಗಳು, ಶಂಖಗಳ ನಾದ, ಕೊಂಬಿನ ಧ್ವನಿ, ಕುಂದಾಪುರದ ದೋಲಿನ ಸದ್ದು, ಚೆಂಡೆ ವಾದನದ ಸೊಗಸು,ಕಲ್ಲಡ್ಕದ ಗೊಂಬೆ ಕುಣಿತ, ತುಳುನಾಡಿನ ಆಟಿಕಳಂಜ.ಮೆರವಣಿಗೆಯಲ್ಲಿ ಕೇವಲ ಪ್ರದರ್ಶನಕ್ಕಾಗಿ ನಾಲ್ಕು ಬಸವಗಳನ್ನು ಕರೆಯಲಾಗಿದ್ದು ಇವುಗಳು ಈ ಬಾರಿಯ ನುಡಿಸಿರಿಯಲ್ಲಿ ಗಮನ ಸೆಳೆದವು.
ಯಕ್ಷಗಾನ ವೇಷಧಾರಿಸಿದ ಆಳ್ವಾಸ್ ವಿದ್ಯಾರ್ಥಿ ತಂಡ, ಮಂಗಳೂರಿನ ಪೂಜಾ ಕುಣಿತ, ಚಿತ್ರದುರ್ಗದ ಬ್ಯಾಂಡ್, ವೀರಭದ್ರ ಕುಣಿತ ಕನರ್ಾಟಕದ ಸಂಸ್ಕೃತಿಯನ್ನು ಬಿಂಬಿಸುತ್ತಿದ್ದವು.
ತುಳುನಾಡಿನ ಕೊರಗರ ಡೋಲು ಕುಣಿತ, ವಾದ್ಯಗಳು, ಎನ್ಸಿಸಿ, ಸ್ಕೌಟ್ಸ್ ಗೈಡ್ಸ್ ತಂಡ, ಭಾರತದ ಸಾರ್ವಭೌಮತೆಯನ್ನು ಎತ್ತಿಹಿಡಿಯವ ತ್ರಿವರ್ಣ ಉಡುಪಿನೊಂದಿಗೆ ವಿದ್ಯಾಥರ್ಿ ತಂಡ, ಚೆಂಡೆ, ಪಂಚವಾದ್ಯ, ಬೆಳಗಾವಿ ಪೇಟ ಧರಿಸಿದ ಗಣ್ಯರು ಮೆರವಣಿಗೆಯಲ್ಲಿ ಸಾಗಿ ಬಂದದ್ದು ಗಮನ ಸೆಳೆಯಿತು. ಮೆರವಣಿಗೆಯ ಕೊನೆಯಲ್ಲಿ ಕಲಶ ಹಿಡಿದ ವಿದ್ಯಾಥರ್ಿಗಳು ಸಮ್ಮೇಳನದ ಅಧ್ಯಕ್ಷ ಡಾ.ಟಿ.ವಿ ವೆಂಕಟಾಚಲ ಶಾಸ್ತ್ರಿ, ಉದ್ಘಾಟಕರಾದ ಡಾ.ವೀಣಾ ಶಾಂತೇಶ್ವರ, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಮಾಜಿ ಸಚಿವ ಅಮರನಾಥ ಶೆಟ್ಟಿ ಹಾಗೂ ಅತಿಥಿ ಗಣ್ಯರನ್ನು ಸ್ವಾಗತಿಸುತ್ತಾ ಮುಂದೆ ನಡೆದರು. ವೇದಿಕೆಯ ಎಡದಿಂದ ಹೊರಟ ಶಿಸ್ತುಬದ್ಧ ಮೆರವಣಿಗೆ ವಿವೇಕಾನಂದ ನಗರದ ಬೃಹತ್ ಸಭಾಂಗಣಕ್ಕೆ ಸುತ್ತು ಬಂದು ವೇದಿಕೆಯ ಮುಂಬದಿಯಿಂದ ಸಾಗಿ ಸಂಜೆ 6ಗಂಟೆಗೆ ಸಂಪನ್ನಗೊಂಡು ಕಾರ್ಯಕ್ರಮ ಉದ್ಘಾಟನೆಗೆ ಅನುವು ಮಾಡಿಕೊಟ್ಟಿತು

By suddi9

Leave a Reply

Your email address will not be published. Required fields are marked *