ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ (ರಿ) ಇದರ ಸಂಯುಕ್ತ ಆಶ್ರಯದಲ್ಲಿ ವಕೀಲರ ಸಂಘದ ಸಭಾ ಭವನದಲ್ಲಿ ಕಾನೂನು ದಿನಾಚರಣೆ ಕಾರ್ಯಕ್ರಮವನ್ನು ಗೌರವಾನ್ವಿತ ಚಂದ್ರಶೇಖರ ಯು. ಉದ್ಘಾಟಿಸಿದರು.ನ್ಯಾಯವಾದಿ ರಮೇಶ್ ಉಪಾಧ್ಯಾಯ ಮೂಲಭೂತ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಹಾಗೂ ಸಂವಿಧಾನಾತ್ಮಕ ನಾಗರಿಕ ಹಕ್ಕು , ಕರ್ತವ್ಯ ಮತ್ತು ಉಲ್ಲಂಘನೆ ಬಗ್ಗೆ ಮಾಹಿತಿ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಗೌರವಾನ್ವಿತ ಪ್ರಧಾನ ನ್ಯಾಯಾಧೀಶ ದೇವಾನಂದ್ , ಹೆಚ್ಚುವರಿ ನ್ಯಾಯಾಧೀಶರಾದ ಆರ್.ಮಹೇಶ್, ಸಹಾಯಕ ಸರಕಾರಿ ಅಭಿಯೋಜಕ ಎಂ.ಎಸ್.ಆಲಿ, ಅಹಾಯಕ ಸರಕಾರಿ ವಕೀಲರಾದ ಸತೀಶ್ ಕುಮಾರ್ ಶಿವಗಿರಿ ಉಪಸ್ಥಿತರಿದ್ದರು.
