ಬಂಟ್ವಾಳ:ಬಂಟ್ವಾಳ ತಾಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯ ಇದರ ವತಿಯಿಂದ ಇಲ್ಲಿನ ಮಂಚಕಲ್ಲು ಎಣ್ಮಾಜೆ ಮೈದಾನದಲ್ಲಿ ಇದೇ 4ರಂದು (ಶುಕ್ರವಾರ) ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 3.30ರತನಕ ವಾರ್ಷಿಕ ಕೀಡಾಕೂಟ ನಡೆಯಲಿದೆ.
ಕ್ರೀಡಾಕೂಟವನ್ನು ಮಂಗಳೂರು ಮನ್ದೇವ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಉದ್ಘಾಟಿಸುವರು.
ಕಿನ್ನಿಗೋಳಿ ಧರ್ಮಗುರು ಮವರ್ವನ್ ಜಾನ್ ನೊರೋನ್ಹ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಸಂಗಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಧ್ಯಕ್ಷೆ ಗುಲಾಬಿ ಶೆಟ್ಟಿ, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿನಯ ಡಿ.ಪೂಜಾರಿ, ಬಂಟ್ವಾಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೋಹನ್ ಕೆ.ಶ್ರೀಯಾನ್ ರಾಯಿ, ಶಾಲೆ ಸಂಚಾಲಕ ಬಿ.ರಾಧಾಕೃಷ್ಣ ಶೆಟ್ಟಿ, ಟ್ರಸ್ಟಿ ವಿಜಯ ಕುಮಾರ್ ಚೌಟ ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಮುಖ್ಯಶಿಕ್ಷಕಿ ಸಬಿತಾ ಲವಿನ ಪಿಂಟೋ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
