ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಇದರ ವತಿಯಿಂದ ಅಯೋಧ್ಯೆ ಶ್ರೀರಾಮ ಜನ್ಮಸ್ಥಾನದ ಮುಕ್ತಿ ಅಂದೋಲನದ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸತ್ಯನಾರಾಯಣ ಪೂಜೆ ಡಿ.6ರಂದು ಬೆಳಿಗ್ಗೆ ಗಂಟೆ 10ಕ್ಕೆ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ನಡೆಯಲದೆ. ನಂತರ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮೂಡಬಿದ್ರೆ ಶ್ರೀ ಕ್ಷೇತ್ರ ಕರಿಂಜೆ ಮಠದ ಶ್ರೀ ಶ್ರೀ ಶ್ರೀ ಮುಕ್ತಾನಂದ ಸ್ವಾಮೀಜಿ ಆಶೀರ್ವವಚನ ನೀಡಲಿದ್ದಾರೆ. ದಯಾನಂದ ಕತ್ತಲ್ಸಾರ್ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ ಎಂದು ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಘಟಕ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
