ಬಂಟ್ವಾಳ -ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಧರ್ಮಸ್ಥಳದಿಂದ ಬರುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಬಿ.ಸಿ.ರೋಡ್ ನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಮಾರುತಿ ಓಮ್ನಿ ಕಾರು ಸೋಮವಾರ ಬೆಳಿಗ್ಗೆ ಪರಸ್ಪರ ಮುಖಾಮುಖಿ ಡಿಕ್ಕಿ ಹೊಡೆದು ರಸ್ತೆ ಬದಿ ಉರುಳಿ ಬಿದ್ದ ಘಟನೆ ಬಡಗುಂಡಿ ಎಂಬಲ್ಲಿ ನಡೆದಿದೆ.
ಪರಿಣಾಮ ಕಾರು ಚಾಲಕ ಮುಡಿಪು ನಿವಾಸಿ ಸತ್ಯದೇವ ಅಜ್ರಿ ನಾವಡ ಎಂಬವರು ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಸಂಚಾರಿ ಠಾಣೆ ಪೊಲೀಸರು ತಿಳಿಸಿದ್ದಾರೆ.

