ಬಂಟ್ವಾಳ: ಗ್ರಾಮ ಪಂಚಾಯತ್ಗಳಿಗೆ ಯಾವುದೇ ನಿರ್ಣಯ ತೆಗೆದುಕೊಳ್ಳುವ ಅಕಾರವಿದ್ದರೂ ಮೊಟಕುಗೊಳಿಸಲಾಗಿದೆ ಈ ನಿಟ್ಟಿನಲ್ಲಿ ಗ್ರಾ.ಪಂ.ಗಳಿಗೆ ಅಧಿಕಾರ ದೊರಕಿಸಿಕೊಡಲು ಪ್ರಯತ್ನ ನಡೆಸಲಾಗುವುದು.ಪಂಚಾಯತ್ ರಾಜ್ ವ್ಯವಸ್ಥೆಯ ಸಬಲೀಕರಣ ಪ್ರಮುಖ ಉದ್ದೇಶವಾಗಿದ್ದು ಪಕ್ಷ ತನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಪ್ರಾಮಾಣಿಕವಾಗಿ ಪಕ್ಷ ಮತ್ತು ಜವಾಬ್ದಾರಿಯುತ ಸ್ಥಾನಕ್ಕೆ ನ್ಯಾಯ ಒದಗಿಸಿಕೊಡುತ್ತೇನೆ ಎಂದು ವಿದಾನಪರಿಷತ್ ಬಿಜೆಪಿ ಅಭ್ಯರ್ಥಿ  ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು.

kota
ಅವರು ಡಿ.21 ರಂದು ಬಂಟ್ವಾಳ ತಾಲೂಕಿನ ರಾಯಿ ಗ್ರಾ.ಪಂ.ವ್ಯಾಪ್ತಿಯ ಜನಪ್ರತಿನಿಧಿ ಮತದಾರರಲ್ಲಿ ಮತಯಾಚನೆ ನಡೆಸಿ ಮಾತನಾಡಿದರು. ರಮೇಶ್ ಕುಮಾರ್ ವರದಿ ಅನುಷ್ಠಾನಗೊಳಿಸುವಲ್ಲಿ ಬಿಜೆಪಿ ಪ್ರಮುಖ ಪಾತ್ರ ವಹಿಸಿದ್ದು ,ಕಾರ್ಯಕರ್ತರ ಸಂಘಟನಾತ್ಮಕ ಹೋರಾಟ ಬಿಜೆಪಿಗೆ ಬಲ ತಂದಿದೆ ಎಂದ ಅವರು ಚುನಾವಣೆಯಲ್ಲಿ ಗೆಲ್ಲಿಸಲು ಎಲ್ಲರೂ ಸಹಕಾರ ನೀಡಬೇಕೆಂದು ವಿನಂತಿಸಿಕೊಂಡರು.

ಬಿಜೆಪಿ ಪ್ರಮುಖರಾದ ರುಕ್ಮಯ ಪೂಜಾರಿ,ರಾಜೇಶ್ ನಾಕ್ ಉಳಿಪಾಡಿಗುತ್ತು, ಜಿ.ಆನಂದ, ದೇವಪ್ಪ ಪೂಜಾರಿ,ರಾಮದಾಸ ಬಂಟ್ವಾಳ,ದುರ್ಗಾದಾಸ್ ಶೆಟ್ಟಿ ಮಾವಂತೂರು, ಜಿ.ಪಂ.ಸದಸ್ಯೆ ನಳಿನಿ ಬಿ.ಶೆಟ್ಟಿ, ತಾ.ಪಂ.ಸದಸ್ಯ ವಸಂತ ಕುಮಾರ್ ಅಣ್ಣಳಿಕೆ, ವಲಯ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಬೆಟ್ಟು , ಗ್ರಾ.ಪಂ.ಅಧ್ಯಕ್ಷ ದಯಾನಂದ ಸಪಲ್ಯ, ಉಪಾಧ್ಯಕ್ಷೆ ಪುಷ್ಪಲತಾ,ಸದಸ್ಯರಾದ ಹರೀಶ್ ಆಚಾರ್ಯ,ರಾಘವ ಅಮೀನ್,ಕುಸುಮ,ಯಶೋಧ, ನಿರುಪಮಾ ಎಸ್.ಭಂಡಾರಿ, ಪದ್ಮನಾಭ ಗೌಡ ಮತ್ತಿತರರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *