ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಬಳಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪರಭಾರೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮತ್ತು ಸುಬ್ರಹ್ಮಣ್ಯ ಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಆಲಿ, ಪ್ರಮುಖರಾದ ಸುದರ್ಶನ್ ಜೈನ್, ಲುಕ್ಮಾನ್ ಮತ್ತಿತರರು ಇದ್ದರು.

