ಬಂಟ್ವಾಳ: ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ., ಬೆಂಗಳೂರು, ಇದರ ನಿರ್ದೇಶಕ ಸ್ಥಾನಕ್ಕೆ ಮುಂದಿನ 5 ವರ್ಷಗಳ ಅವಧಿಗೆ ಡಿ.26ರಂದು ಶನಿವಾರ ಜರಗಿದ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ನಿರ್ದೇಶಕರಾಗಿ ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾದ ಸುದರ್ಶನ್ ಜೈನ್ರವರು ಭಾರಿ ಬಹುಮತದಿಂದ ಆಯ್ಕೆಯಾಗಿರುತ್ತಾರೆ.
ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನಿರ್ದೇಶಕರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿ ನಿರ್ದೇಶಕರಾಗಿ ಸೇವೆ ಸಲ್ಲಿಸಿರುತ್ತಾರೆ
