ಮೂಡುಬಿದರೆ: ಮಕ್ಕಳ ವ್ಯಕ್ತಿತ್ವವನ್ನು ವಿಕಸನಗೊಳಿಸುವ ಮೌಲ್ಯಾಧಾರಿತ ಶಿಕ್ಷಣದ ಅಗತ್ಯವಿದೆ ಎಂದು ಕಾರ್ಪೊರೇಶನ್ ಬ್ಯಾಂಕ್ ಮಂಗಳೂರು ವಲಯ ಇದರ ಡೆಪ್ಯೂಟಿ ಜನರಲ್ ಮೆನೇಜರ್ ಎಂ.ಬಿ ಗಣೇಶ್ ಹೇಳಿದರು.ಶನಿವಾರ ಎಂ.ಕೆ ಶೆಟ್ಟಿ ಸೆಂಟ್ರಲ್ ಸ್ಕೂಲ್ ಕಲ್ಲಬೆಟ್ಟು ಇದರ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳನ್ನು ದೇಶದ ಸತ್‍ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಜತೆಗೆ ಹೆತ್ತವರ ಜವಬ್ದಾರಿ ಕೂಡ ಇದೆ. ಮಕ್ಕಳಿಗೆ ಒತ್ತಡದ ಶಿಕ್ಷಣ ಬೇಡ. ಅವರಲ್ಲಿ ಕಲಿಸುವ ಆಸಕ್ತಿ ಮತ್ತು ಕ್ರಿಯಾಶೀಲತೆ ಬೆಳೆಸಬೇಕು ಎಂದು ಸಲಹೆಯಿತ್ತರು.
mbd_jan4_3 (1)
ಭಾರತದ ಬ್ಯಾಂಕ್ ನೌಕರರ ಸಂಘದ ವತಿಯಿಂದ ದೇಶಾದ್ಯಂತ ಸಮಾರು 1.25 ಲಕ್ಷದಷ್ಟು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದ ಬಗ್ಗೆ ಮಾಹಿತಿಯನ್ನು ನೀಡುವ ಕಾರ್ಯಕ್ರಮವನ್ನು ಹಮಿಕೊಂಡಿದ್ದೇವೆ. ಇದರ ಪರಿಣಾಮವಾಗಿ 8ರಿಂದ 10 ವರ್ಷದ ಯುವಕರಿಗು ಬ್ಯಾಂಕ್‍ನಲ್ಲಿ ಖಾತೆ ತೆರದು ವ್ಯವಹರಿಸುವ ಅವಕಾಶವನ್ನು ಕಲ್ಪಿಸಲಾಗಿದೆ ವಿದ್ಯಾರ್ಥಿಗಳು ಇದರ ಸದುಪ[ಯೋಗಪಡಕೊಳ್ಳಬೇಕು ಎಂದು ಹೇಳಿದರು.
ಪುರಸಭೆ ಅಧ್ಯಕ್ಷೆ ರೂಪಾ ಎಸ್. ಶೆಟ್ಟಿ, ಉದ್ಯಮಿ ಸಯ್ಯದ್ ಇಮ್ತಿಯಾಝ್ ಆರ್.ಬಿ ಮೂಡುಬಿದಿರೆ, ಪೋಷಕ-ಶಿಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಭಂಡಾರಿ, ಕಾರ್ಯದರ್ಶಿ ಪ್ರಸನ್ನ ಹೆಗ್ಡೆ, ವಿದ್ಯಾರ್ಥಿ ನಾಯಕಿ ಐಮನ್ ಅಫ್ರಿ, ಉಪಸ್ಥಿತರಿದ್ದರು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಸ್ವಾಗತಿಸಿದರು. ಪ್ರಾಂಶುಪಾಲೆ ನಿಶ್ಮಿತಾ ಬಿ. ವರದಿ ವಾಚಿಸಿದರು. ಹರ್ಷಿತ ನಿರೂಪಿಸಿದರು. ಸಂಸ್ಥೆಯ ಕಾರ್ಯದರ್ಶಿ ರೇಶ್ಮಾ ಎಸ್. ಶೆಟ್ಟಿ ವಂದಿಸಿದರು.

 

By suddi9

Leave a Reply

Your email address will not be published. Required fields are marked *