ಮುಂಬಯಿ, ಜ.08: ದಿ.ಭಾರತ್ ಕೋ.ಅಪರೇಟಿವ್ ಬ್ಯಾಂಕ್ (ಮುಂಬಯಿ) ನಿಯಮಿತ ತನ್ನ 87ನೇ ಶಾಖೆಯು ಕಳೆದ ಬುಧವಾರ ಬೈಕಲಾ ಅಲ್ಲಿನ ಘೊಡಪ್‍ದೇವ್ ಅಲ್ಲಿನ ರಾಮ್‍ಬಾವು ಭೊಗ್ಳೆ ಮಾರ್ಗದಲ್ಲಿನ ಜೈಕೃಪಾ ಕಟ್ಟಡದಲ್ಲಿ ಸೇವಾರಂಭಿಸಿದ್ದು, ಈ ಸಂದರ್ಭದಲ್ಲಿ ಭಾರತ್ ಬ್ಯಾಂಕ್‍ನ 75ನೇ ಉದ್ಘಾಟನಾ ಶಾಖೆಯ ವರದಿಗೈದ ನಗರದ ಕ್ರೀಯಶೀಲ ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಬ್ಯಾಂಕ್‍ನ ಕಾರ್ಯಾಧ್ಯಕ್ಷ ಜಯ ಸಿ.ಸುವರ್ಣರು ಶಾಲು ಹೊದಿಸಿ ಫಲಪುಷ್ಪಗಳನ್ನಿತ್ತು ಸನ್ಮಾನಿಸಿದರು.

ಇದೇ ಶುಭಾವಸರದಲ್ಲಿ ಉಪಸ್ಥಿತ ಮೋಗವೀರ ಕೋ.ಅಪರೇಟಿವ್ ಬ್ಯಾಂಕ್‍ನ ಉಪಾಧ್ಯಕ್ಷ ಸುರೇಶ್ ಆರ್. ಕಾಂಚನ್ ಮತ್ತು ಕಟ್ಟಡದ ಮಾಲೀಕ ನಾರಾಯಣ ಶೆಟ್ಟಿ ಮತ್ತು ಶ್ರೀಮತಿ ಸುಂದರಿ ಶೆಟ್ಟಿ ದಂಪತಿಯನ್ನು ಸನ್ಮಾನಿಸಿ ಅಭಿನಂದಿಸಿದರು.

 

DSC_0726

DSC_0727

IMG-20160106-WA0005

ಈ ಸಂದರ್ಭದಲ್ಲಿ ಬ್ಯಾಂಕ್‍ನ ಉಪ ಕಾರ್ಯಾಧ್ಯಕ್ಷೆ ನ್ಯಾ| ರೋಹಿಣಿ ಜೆ.ಸಾಲ್ಯಾನ್, ಆಡಳಿತ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಆರ್ ಮೂಲ್ಕಿ, ಬ್ಯಾಂಕ್‍ನ ನಿರ್ದೇಶಕರುಗಳಾದ ಪುಷ್ಫಲತಾ ಎನ್. ಸಾಲ್ಯಾನ್, ಯು.ಎಸ್ ಪೂಜಾರಿ, ಭಾಸ್ಕರ್ ಎಂ.ಸಾಲ್ಯಾನ್, ರೋಹಿತ್ ಎಂ.ಸುವರ್ಣ, ಹರೀಶ್ಚಂದ್ರ ಜಿ.ಮೂಲ್ಕಿ, ಆರ್.ಡಿ ಪೂಜಾರಿ, ಕೆ.ಬಿ ಪೂಜಾರಿ, ಗಂಗಾಧರ್ ಜೆ.ಪೂಜಾರಿ, ಅಶೋಕ್ ಎಂ. ಕೋಟ್ಯಾನ್, ಜ್ಯೋತಿ ಕೆ.ಸುವರ್ಣ, ಸಿ.ಟಿ ಸಾಲ್ಯಾನ್, ಮಾಜಿ ನಿರ್ದೇಶಕ ಎನ್.ಎಂ ಸನೀಲ್, ಬ್ಯಾಂಕ್‍ನ ಮುಖ್ಯ ವ್ಯವಸ್ಥಾಪಕ ಅನಿಲ್‍ಕುಮಾರ್ ಆರ್.ಅವಿೂನ್, ಮಹಾ ಪ್ರಂಬಧಕಿ ಶೋಭಾ ದಯಾನಂದ್, ಮಹಾ ಪ್ರಂಬಧಕ ನಿತ್ಯಾನಂದ ಡಿ.ಕೋಟ್ಯಾನ್ ಅವರು ಶಾಖೆಯ ಮುಖ್ಯಸ್ಥ ಶೈಲೇಶ್ ಕರ್ಕೇರ, ಸಹಾಯಕ ಪ್ರಬಂಧಕಿ ಜಯಶ್ರೀ ಎಸ್.ಬಂಗೇರಾ, ಬ್ಯಾಂಕ್‍ನ ಅಭಿವೃದ್ಧಿ ಇಲಾಖಾಧಿಕಾರಿಗಳಾದ ಸುನೀಲ್ ಗುಜರನ್, ವಿಜಯ ಪಾಲನ್, ಶ್ರೀನಿವಾಸ ಆರ್.ಕರ್ಕೇರಾ, ಸಿಎ| ಅಶ್ವಜಿತ್ ಹೆಜ್ಮಾಡಿ ಮತ್ತಿತರರು ಉಪಸ್ಥಿತರಿದ್ದು ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ವಿಶೇಷವಾಗಿ ಅಭಿನಂದಿಸಿ ಶುಭಾರೈಸಿದರು.

By suddi9

Leave a Reply

Your email address will not be published. Required fields are marked *