ಬಂಟ್ವಾಳ:ತಾಲ್ಲೂಕಿನ ವಾಮದಪದವು ಸಮೀಪದ ಕೋರ್ಲೊಡಿ ನಿವಾಸಿ, ಪ್ರಗತಿಪರ ಕೃಷಿಕ ಜನಾರ್ಧನ ಸಪಲ್ಯ (70 ಇವರು ಶನಿವಾರ ಸ್ವಗೃಹದಲ್ಲಿ ನಿಧನರಾದರು.
ಮೃತರಿಗೆ ಪತ್ನಿ, ಪುತ್ರ ಮತ್ತು ಮೂವರು ಪುತ್ರಿಯರು ಇದ್ದಾರೆ.
ಹೈನುಗಾರರಾಗಿದ್ದ ಇವರು ವಾಮದಪದವು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ, ನಿರ್ದೇಶಕರಾಗಿ ದುಡಿದಿದ್ದರು. ಆರ್‍ಎಸ್‍ಎಸ್‍ನ ಹಿರಿಯ ಸದಸ್ಯರಾಗಿ ಜನಸಂಘ ಮತ್ತು ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಇಲ್ಲಿನ ಜನಹಿತ ವಿಶ್ವಸ್ತ ಮಂಡಳಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿದ್ದರು.

