ಕೈಕಂಬ:ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು ಸರಕಾರದಿಂದ ದೊರೆಯುವ ಸೌಲಭ್ಯಗಳಿಂದ ವಂಚಿತರಾಗದಂತೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ, ಎಂದು ಭಾರತ ಸರಕಾರದ ಕೇಂದ್ರಿಯ ಕಾರ್ಮಿಕ ಶಿಕ್ಷಣ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ಮಂಗಳೂರು ಇದರ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹೇಳಿದರು.
ಅವರು ದಿಶಾ ಟ್ರಸ್ಟ್ ಕೈಕಂಬ ಇದರ ಕಚೇರಿಯಲ್ಲಿ ನಡೆದ ಎರಡು ದಿನಗಳ ಅಸಂಘಟಿತ ಕಾರ್ಮಿಕರ ತರಭೇತಿ ಶಿಬಿರವನ್ನು ಉದ್ಘಾಟಿಸಿ ಮಾಹಿತಿ ನೀಡುತ್ತಿದ್ದರು.

ಭಾರತ ಸರಕಾರದ ಕೇಂದ್ರೀಯ ಕಾರ್ಮಿಕ ಶಿಕ್ಷಣ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ಮಂಗಳೂರು ಇವರ ಆಶ್ರಯದಲ್ಲಿ ದಿಶಾ ಟ್ರಸ್ಟ್ (ರಿ) ಕೈಕಂಬ, ಸ್ಪಂದನ ಸ್ವ ಸಹಾಯ ಸಂಘಗಳ ಒಕ್ಕೂಟ ಗುರುಪುರ ಕೈಕಂಬ ಇವರ ಸಹಕಾರದೊಂದಿಗೆ ತರಭೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪಂದನ ಒಕ್ಕೂಟದ ಅಧ್ಯಕ್ಷರಾದ ಕುಮಾರಿ ಅನುಸೂಯ ಕಾಜವ, ಕೋಶಾಧಿಕಾರಿ ಕುಮಾರಿ ಎಲ್ಸಿ ಡಿಸೋಜ ಉಪಸ್ಥಿತರಿದ್ದರು. ದಿಶಾ ಸಂಸ್ಥೆಯ ನಿರ್ದೇಶಕರಾದ ಸಿಲ್ವೆಸ್ಟರ್ ಡಿ ಸೋಜ, ಕ್ಷೇತ್ರ ಸಂಯೋಜಕರಾದ ರುದೇಶ್ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು. ದಿಶಾ ಸಂಸ್ಥೆಯ ಕ್ಷೇತ್ರ ಮೇಲ್ವಿಚಾರಕರಾದ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿ , ಅನುಸೂಯ ಕಾಜವ ಸ್ವಾಗತಿಸಿ ವಂದಿಸಿದರು.
