ಕಲ್ಲಡ್ಕ : ದಿನಾಂಕ 16.01.2016 ರಂದು ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿ ವಿದ್ಯಾರ್ಥಿಗಳು ಸಾಮೂಹಿಕ ಭಜನೆ ಮಾಡುವ ಮೂಲಕ ಮಕರ ಸಂಕ್ರಾಂತಿ ಉತ್ಸವವನ್ನು ಹಾಗೂ ನವಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಹುಟ್ಟಿದ ಮಕ್ಕಳ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಸಭಾಕಾರ್ಯಕ್ರಮದಲ್ಲಿ ಶ್ರೀಮತಿ ಕಮಲಾ ಪ್ರಭಾಕರ್ ಭಟ್ ಅವರು ಮಕರ ಸಂಕ್ರಾಂತಿಯ ಮಹತ್ವವನ್ನು ತಿಳಿಸಿದರು. ಶ್ರೀರಾಮ ಪದವಿ ಕಾಲೇಜಿನ ಉಪನ್ಯಾಸಕಿ ಜಯಲಕ್ಷ್ಮೀ ಹಾಗೂ ಹಿರಿಯ ವಿದ್ಯಾರ್ಥಿನಿಯಾದ ಚೈತ್ರಾ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಮುಖ್ಯೋಪಾಧ್ಯಾಯರು ರವಿರಾಜ್ ಕಣಂತೂರು ಉಪಸ್ಥಿತರಿದ್ದರು. ಮಕರ ಸಂಕ್ರಾಂತಿಯ ಪ್ರಯುಕ್ತ ಎಳ್ಳು ಬೆಲ್ಲವನ್ನು ಎಲ್ಲರಿಗೂ ವಿತರಿಸಲಾಯಿತು.

