ದ ಕ ಜಿಲ್ಲಾ ಪೋಲೀಸ್ ಮತ್ತು ಲಯನ್ಸ್ ಕ್ಲಬ್ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2016-17 ಕಾರ್ಯಕ್ರಮವನ್ನು ವಿಟ್ಲದ ಸೈಂಟ್ ರೀಟಾ ವಿದ್ಯಾ ಸಂಸ್ಥೆಯ ಸಹಕಾರದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಸುರಕ್ಷತಾ ಜಾತಾವು ವಿಟ್ಲದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ನಂತರ ಪೋಲೀಸ್ ಠಾಣೆಯಲ್ಲಿ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ವಿಟ್ಲ ಠಾಣಾಧಿಕಾರಿ ಪ್ರಕಾಶ್ ದೇವಾಡಿಗ ಮಾಹಿತಿ ನೀಡಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಸತೀಶ್ ಆಳ್ವ ಸ್ವಾಗತಿಸಿದರು. ಸುದರ್ಶನ್ ಪಡಿಯಾರ್ ವಂದಿಸಿದರು. ರೀಟಾ ಶಾಲಾ ಮಕ್ಕಳು, ಲಯನ್ಸ್ ಕ್ಲಬ್ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.



