ಬಂಟ್ವಾಳ:ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯೂತ್ ರೆಡ್ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ, ರೆಡ್ರಿಬ್ಬನ್ ಕ್ಲಬ್, ವಿದ್ಯಾರ್ಥಿ ಕ್ಷೇಮಪಾಲನ ವೇದಿಕೆ, ಹಳೆ ವಿದ್ಯಾರ್ಥಿ ಸಂಘ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇದೇ 22ರಂದು ಬೆಳಿಗ್ಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ.
ಚೆನ್ನೈತ್ತೋಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಯತೀಶ್ ಶೆಟ್ಟಿ ವಿಜಯನಗರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ರಾವ್ ಮತ್ತು ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ಡಾ.ಮುರಳಿ ಮೋಹನ್ ಚೂಂತಾರು ಮತ್ತಿತರ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *