ಬಂಟ್ವಾಳ: ಮನುಷ್ಯನಿಗಿರುವಂತೆ ಪ್ರಾಣಿ-ಪಕ್ಷಿಗಳಿಗೆ ಜಾತಿವಾಚಕಗಳಿಲ್ಲ. ಆದರೆ ಮನುಷ್ಯ ಮಾತ್ರ ವಿವಿಧ ಜಾತಿ, ಧರ್ಮಗಳಿಂದ ಗುರುತಿಸಲ್ಪಡುತ್ತಾನೆ. ವಿವಿಧ ಜಾತಿ, ಧರ್ಮ ಮತಗಳ ಮಕ್ಕಳು ವಿದ್ಯಾರ್ಥಿಗಳೆಂಬ ಹೆಸರಲ್ಲಿ ಒಂದುಗೂಡುವ ಏಕೈಕ ಸ್ಥಳ ಅದು ಶಾಲೆ. ಶಾಲೆಯು ನಮ್ಮ ದೇಶದ ಪ್ರಜಾಪ್ರಭುತ್ವದ ಒಳ ಗಟ್ಟಿನೆಲೆಯಾಗಿದೆ ಎಂದು ಬೆಳ್ಳಾರೆ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ, ಖ್ಯಾತ ಸಾಹಿತಿ ಡಾ|ನರೇಂದ್ರ ರೈ ದೇರ್ಲ ಅವರು ಹೇಳಿದರು.
ಅವರು ಬಂಟ್ವಾಳ ತಾಲೂಕಿನ ಕಲಾಬಾಗಿಲು ಬುರೂಜ್ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ರಝಾನಗರ ಇಲ್ಲಿಯ 17 ನೇ ವಾರ್ಷಿಕೋತ್ಸವದಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ , ಪ್ರತಿಭಾ ಪುರಸ್ಕಾರ ನೀಡಿ ದಿಕ್ಸೂಚಿ ಭಾಷಣ ಮಾಡಿದರು.
ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಮಧ್ವ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ತೀರ್ಪು ಗಾರರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಂ.ರಾಜೀವ ಶೆಟ್ಟಿ ಎಡ್ತೂರು, ವಾಮದಪದವು ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಯಶೋಧರ ಶೆಟ್ಟಿ, ತಾ.ಪಂ.ಸದಸ್ಯರಾದ ಬಿ.ಪದ್ಮಶೇಖರ ಜೈನ್,ರಮೇಶ್ ಕುಡ್ಮೇರ್,ಪಿಲಾತಬೆಟ್ಟು ಗ್ರಾ.ಪಂ.ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷ ಯತೀಶ್ ಶೆಟ್ಟಿ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ, ಇರ್ವತ್ತೂರು ಗ್ರಾ.ಪಂ.ಸದಸ್ಯೆ ಜಯಶ್ರೀ ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಶುಭ ಹಾರೈಸಿದರು.
ಶಾಲಾ ಸಂಚಾಲಕ ಶೇಕ್ ರಹ್ಮತ್ತುಲ್ಲಾ ಅವರು ಸ್ವಾಗತಿಸಿದರು. ಮುಖ್ಯ ಶಿಕ್ಷಕ ಲೋಕಯ್ಯ ಶಿಶಿಲ ಅವರು ಶಾಲಾ ವಾರ್ಷಿಕ ವರದಿ ವಾಚಿಸಿದರು. ಶಾಲಾ ಶಿಕ್ಷಕಿಯರಾದ ಸಂಧ್ಯಾ ಶೆಟ್ಟಿ, ಎಸ್.ಪಿ. ರಝೀಯಾ, ಲೋಕಯ್ಯ ಶಿಶಿಲ ಮತ್ತು ಶೆಹನಾಝ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಮಮತಾ ಆರ್.ಗೌಡ ವಂದಿಸಿದರು.
