ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ ಕೈಕಂಬ ಇಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಶಾಲಾ ಸಂಚಾಲಕ ಜೆ.ಬಿ.ಸಿಕ್ವೇರ ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಿದರು.
ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಅನಂತಕೃಷ್ಣ ಕಾಮತ್, ಪ್ರಾಂಶುಪಾಲ ಮಹೇಶ್ ಶೆಟ್ಟಿ, ಮುಖ್ಯ ಶಿಕ್ಷಕಿಯರಾದ ಸ್ವರ್ಣಲತಾ, ಐರಿನ್ ಸಾಂತುಮಯೂರ್, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುಕನ್ಯ ಸ್ವಾಗತಿಸಿ, ನಿಶ್ಮಿತಾ ವಂದಿಸಿದರು. ವೀಣಾ ಕಾರ್ಯಕ್ರಮ ನಿರೂಪಿಸಿದರು.
