ಮೂಡುಬಿದಿರೆ: ರೋಟರಿ ಕ್ಲಬ್ ಮತ್ತು ಅರಣ್ಯ ಇಲಾಖೆಯ ಆಶ್ರಯದಲ್ಲಿ 67ನೇ ಗಣರಾಜ್ಯೋತ್ಸವವು ಸ್ವರಾಜ್ಯ ಮೈದಾನದಲ್ಲಿ ನಡೆಯಿತು. ಯುವಜನ ಸೇವೆ ಮತ್ತು ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್ ಧ್ವಜಾರೋಹಣ ನೆರವೇರಿಸಿ ತೆರೆದ ಜೀಪಿನಲ್ಲಿ ಸಾಗಿ ವಿದ್ಯಾರ್ಥಿಗಳ ಗೌರವರಕ್ಷೆ ಸ್ವಿಕರಿಸಿದರು.
26mood rotaryಪುರಸಭಾಧ್ಯಕ್ಷೆ ರೂಪಾ ಸಂತೋಷ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ಎಲ್ಲಾ ಶಾಲಾ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಮೂಲಕ ಏಕತೆಯ ಮನೋಭಾವನೆಯನ್ನು ಬೆಳೆಸುತ್ತಿದೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಚ್. ಆರ್ ಸುಬ್ರಹ್ಮಣ್ಯ ಮಾತನಾಡಿ ಬ್ರಿಟಿಷರ ದಾಸ್ಯದಿಂದ ಮುಕ್ತಿ ಹೊಂದಿದ ನಾವು ಶ್ರೇಷ್ಠವಾದ ಪ್ರಜಾಪ್ರಭುತ್ವವನ್ನು ಹೊಂದಿದ್ದೇವೆ. ಇನ್ನು ಹೆಚ್ಚಿನ ಪ್ರಗತಿ ಹೊಂದಲು ಪಣತೋಡಬೇಕು ಎಂದರು. ರೋಟರಿ ಕ್ಲಬ್ ಅಧ್ಯಕ್ಷ ಪಿ. ಕೆ. ಥೋಮಸ್ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ಸುರೇಶ್ ಜೈನ್, ಪುರಸಭಾ ಉಪಾಧ್ಯಕ್ಷೆ ಶಕುಂತಳಾ ದೇವಾಡಿಗ, ಅರಣ್ಯಾಧಿಕಾರಿ ಜಿ.ಡಿ. ದಿನೇಶ್, ಕಾರ್ಯಕ್ರಮ ಸಂಚಾಲಕ ಯತಿ ಕುಮಾರ್ ಸ್ವಾಮಿ ಗೌಡ ಉಪಸ್ಥಿತರಿದ್ದರು. ಡಾ. ಪುಂಡಿಕಾೈ ಗಣಪಯ್ಯ ಭಟ್ ಕಾರ್ಯಕ್ರಮ ನಿರ್ವಹಿಸಿದರು.

ಪುರಸಭೆಯಲ್ಲಿ ಗಣರಾಜ್ಯೋತ್ಸವ:
ಸ್ವಾತಂತ್ರ್ಯದ ನಂತರ ಭಾರತ ದೇಶ ಬಲಿಷ್ಠವಾಗಿ ಬೆಳೆಯುತ್ತಿದೆ ಹಾಗೂ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದುವರೆಯುತ್ತಿದೆ. ಸ್ವಾತಂತ್ರ್ಯ ಸಿಗುವ ಮೊದಲು ದೇಶದಲ್ಲಿ ಆಹಾರದ ಕೊರತೆ, ಶಿಕ್ಷಣದ ಕೊರತೆ ಇತ್ತು. ಆದರೆ ಇಂದು ಇಂದು ಕೊರತೆಗಳನ್ನು ನೀಗಿಸಿ ದೇಶ ಶಿಕ್ಷಣದ ಮೂಲಕ ಬಲಿಷ್ಠವಾಗಿದೆ ಎಂದು ಮೀನುಗಾರಿಕೆ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು.
ಮೂಡುಬಿದರೆ ಪುರಸಭೆಯ ವತಿಯಿಂದ ನಡೆದ ಮಂಗಳವಾರ ಆಚರಿಸಿದ 67ನೇ ವರ್ಷದ ಗಣರಾಜ್ಯ ದಿನಾಚರಣೆಯಲ್ಲಿ ಧ್ವಜವನ್ನರಳಿಸಿ ಮಾತನಾಡಿ ಶಿಕ್ಷಣದ ಮೂಲಕವೇ ದೇಶ ಬಲಿಷ್ಠವಾಗಿ ಬೆಳೆಯಲು ಸಾಧ್ಯ ಎಂದರು.
ಪುರಸಭಾಧ್ಯಕ್ಷೆ ರೂಪಾ ಸಂತೋಷ್ ಶೆಟ್ಟಿ, ಉಪಾಧ್ಯಕ್ಷೆ ಶಕುಂತಲಾ ದೇವಾಡಿಗ, ಸ್ಥಾಯಿ ಸಮಿತಿ ಅಧ್ಯಕ್ಷ ಕೊರಗಪ್ಪ, ಮೂಡಾ ಅಧ್ಯಕ್ಷ ಸುರೇಶ್ ಕೋಟ್ಯಾನ್, ಸದಸ್ಯರಾದ ಬಾಹುಬಲಿ ಪ್ರಸಾದ್, ರತ್ನಾಕರ ದೇವಾಡಿಗ, ಲಕ್ಷ್ಮಣ್ ಪೂಜಾರಿ, ಕಂದಾಯ ನಿರೀಕ್ಷಕ ಧನಂಜಯ, ಪರಿಸರ ಅಧಿಕಾರಿ ಶಿಲ್ಪಾ, ಆರೋಗ್ಯ ನಿರೀಕ್ಷಕ ಸಾಜಿದ್, ಸಿಬಂದಿ ಸುದೀಶ್ ಹೆಗ್ಡೆ ಮತ್ತಿತರರು ಭಾಗವಹಿಸಿದ್ದರು.

By suddi9

Leave a Reply

Your email address will not be published. Required fields are marked *