ಮೂಡುಬಿದಿರೆ: ಬೆಂಗಳೂರಿನ ಮನೀಖ್ ಷಾ ಪರೇಡ್ ಮೈದಾನದಲ್ಲಿ ನಡೆದ 67ನೇ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಆಳ್ವಾಸ್ ಪ.ಪೂ ಕಾಲೇಜಿನ ಎನ್ಎಸ್ಎಸ್ ಘಟಕದ ಇಬ್ಬರು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ರಾಜ್ಯದ ಪ.ಪೂ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ನಾಲ್ಕು ಜನ ಪಥಸಂಚಲನದಲ್ಲಿ ಭಾಗವಹಿಸಿದ್ದು, ಆಳ್ವಾಸ್ನ ಹಂಸ ಹಾಗೂ ಪಾವನ ಎನ್ಎಸ್ಎಸ್ ಘಟಕವನ್ನು ಪ್ರತಿನಿಧಿಸಿದ್ದಾರೆ.
