ಮೂಡಬಿದಿರೆ: ಶ್ರೀ ಮಹಾವೀರ ಕಾಲೇಜಿನ ಸುವರ್ಣ ಮಹೋತ್ಸವದಂಗವಾಗಿ ಕಾಲೇಜಿನ ವಿದ್ಯಾರ್ಥಿ ಸಂಘವು ಎಂ.ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಹಯೋಗದೊಂದಿಗೆ ಪೆ. 13 ರಂದು ಜಿ.ವಿ.ಪೈ ಕ್ರೀಡಾಂಗಣದಲ್ಲಿ ಗ್ರಾಮೀಣ ವಾಲಿಬಾಲ್ ಪಂದ್ಯಾಟ ಮತ್ತು ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ಪಂದ್ಯಾಟವನ್ನು ಆಯೋಜಿಸಿದೆ.
ಪೆ.13ರಂದು ಮಧ್ಯಾಹ್ನ 3.00ಗಂಟೆಗೆ ಮೂಡಾ ಅಧ್ಯಕ್ಷ ಸುರೇಶ್ ಕೋಟ್ಯಾನ್ ಗ್ರಾಮೀಣ ವಾಲಿಬಾಲ್ ಪಂದ್ಯಾಟ ಉದ್ಘಾಟಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆ ವಹಿಸಲಿದ್ದು, ಪುರಸಭಾ ಅಧ್ಯಕ್ಷೆ ರೂಪಾ ಸಂತೋಷ್ ಶೆಟ್ಟಿ ಮುಖ್ಯ ಅತಿಥಿಗಳಾಗಿರುವರು ಎಂದು ಎಂ.ಕೆ.ಎ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ .
ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ಪಂದ್ಯಾಟವನ್ನು ಪೆ.13 ರಾತ್ರಿ 8.00ಗಂಟೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ ಉದ್ಘಾಟಿಸಲಿದ್ದಾರೆ. ಸಚಿವ ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಲಿರುವರು.
ಗ್ರಾಮೀಣ ಪಂದ್ಯಾಟಕ್ಕೆ 14 ತಂಡ, ರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ 15 ತಂಡ ಭಾಗವಹಿಸಲಿದೆ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಪ್ರಥಮ ರೂ 30,000, ಮತ್ತು ಟ್ರೋಫಿ, ದ್ವಿತೀಯ ರೂ.15,000 ಮತ್ತು ಟ್ರೋಫಿ, ತೃತೀಯ ರೂ.10000 ಮತ್ತು ಟ್ರೋಫಿ, ಗ್ರಾಮೀಣ ಪಂದ್ಯಾಟಕ್ಕೆ ಪ್ರಥಮ ರೂ.5,000 ಮತ್ತು ಟ್ರೋಫಿ, ದ್ವಿತೀಯ 3000.00 ಮತ್ತು ಟ್ರೋಫಿ ಎಂದು ಅವರು ತಿಳಿಸಿದರು. ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ, ಕ್ರೀಡಾ ನಿರ್ದೇಶಕ ರಾಜ್ ಪ್ರಸಾದ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ಹರೀಶ್, ವಿದ್ಯಾರ್ಥಿ ಸಂಘದ ನಾಯಕರಾದ ನೀಲ್ ಕೆನೆತ್ ವಾಸ್, ಸಂಯೋಜಕ ಧನರಾಜ್ ಗೋಷ್ಠಿಯಲ್ಲಿದ್ದರು.
