ನವದೆಹಲಿ: ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಸಮಾಧಾನಕರ ಆಡಳಿತ ನಡೆಸಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವನ್ನು ಧೂಳೀಪಟ ಮಾಡಿ ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ತನ್ನ ವಿಜಯೋತ್ಸವವನ್ನು ರಾಜಧಾನಿ ದೆಹಲಿಯಲ್ಲಿ ಶನಿವಾರ ಆಚರಿಸಿಕೊಂಡಿದ್ದಾರೆ.

rally

ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಲ್ಯುಟ್ಯೇನ್’ನ ಬಿಜೆಪಿಯ ಕಚೇರಿಯವರೆಗೂ ನಡೆಯುತ್ತಿರುವ ವಿಜಯದ ಮೆರವಣಿಗೆಯಲ್ಲಿ ಸಹಸ್ರ ಸಂಖ್ಯೆಯ ಬೆಂಬಲಿಗರು ಭಾಗವಹಿಸಿದ್ದಾರೆ. ಮೆರವಣಿಗೆ ಪೂರ್ಣಗೊಂಡ ಬಳಿಕ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆ ನಡೆಯಲಿದೆ.

ಸುಮಾರು 25 ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು , ಪಕ್ಷದ ಮುಖಂಡರು ಭಾಗವಹಿಸಿದ್ದರು. ಈ ಸಂಸದೀಯ ಸಭೆಯಲ್ಲಿ ಸೀಟು ಹಂಚವಿಕೆಯ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ನೂತನ ಪ್ರಧಾನಿ ಮೋದಿಗೆ ಭಾರೀ ಭದ್ರತೆಯನ್ನೊದಗಿಸಲಾಗಿದೆ.

By suddi9

Leave a Reply

Your email address will not be published. Required fields are marked *